ಲಕ್ನೋ: ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಕ್ಕೆ ತಲಾ 45 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ.
I demand that Rs 50 lakhs be given to the families of each BJP worker who were killed yesterday. The matter should be investigated either by CBI, SIT or by a sitting/retired judge and strict action be taken against the culprits: Union Minister Ajay Mishra Teni in Lakhimpur Kheri https://t.co/aSSy3PAvpT
— ANI UP (@ANINewsUP) October 4, 2021
Advertisement
ಉತ್ತರ ಪ್ರದೇಶ ಸರ್ಕಾರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ ರೂಪಾಯಿ ನೀಡುವುದಾಗಿಯೂ ಹೇಳಿದೆ. ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲಾಗುವುದು ಮತ್ತು ಮೃತರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಕೊಡಲಾಗುವುದು ಎಂಬ ಭರವಸೆ ನೀಡಿದೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ
Advertisement
#UPDATE | Govt will give Rs 45 lakhs and a govt job to the families of every person who died in Lakhimpur Kheri violence yesterday. The injured will be given Rs 10 lakhs: Uttar Pradesh Govt
— ANI UP (@ANINewsUP) October 4, 2021
Advertisement
ಘಟನೆಗೆ ಸಂಬಂಧಪಟ್ಟಂತೆ ರೈತರು ನೀಡಿದ ದೂರಿನ ಆಧಾರದ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶರೊಬ್ಬರು ಘಟನೆಯ ತನಿಖೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಹಾಗೇ ಯಾವುದೇ ರಾಜಕೀಯ ನಾಯಕರಿಗೂ ಲಖಿಂಪುರ ಖೇರಿಗೆ ಭೇಟಿ ನೀಡಲು ಅವಕಾಶ ನೀಡುವುದಿಲ್ಲ. ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ರೈತ ಸಂಘಟನೆಗಳ ಮುಖಂಡರು ಮಾತ್ರ ಇಲ್ಲಿಗೆ ಬರಬಹುದು ಎಂದೂ ಹೇಳಿದ್ದಾರೆ. ಮೃತ ಎಂಟು ಮಂದಿಯಲ್ಲಿ ನಾಲ್ವರು ರೈತರಾಗಿದ್ದು, ಮೂವರು ಬಿಜೆಪಿ ಕಾರ್ಯಕರ್ತರು, ಒಬ್ಬ ಪತ್ರಕರ್ತ ಎನ್ನಲಾಗಿದೆ. ಸದ್ಯ ರೈತ ಕುಟುಂಬಗಳಿಗೆ ಪರಿಹಾರ ಘೋಷಣೆಯಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್
Advertisement
It has already been made clear that no guilty will be spared. Arrests will also be made very soon. Post-mortem of bodies will be conducted as per law & last rites will be conducted as per their religious beliefs: ADG (Law & Order) Prashant Kumar in Lakhimpur Kheri pic.twitter.com/FMcQra7ulw
— ANI UP (@ANINewsUP) October 4, 2021
ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರನ್ನು ಬಿಜೆಪಿ ಸರ್ಕಾರ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಸದಾ ಆರೋಪಿಸುವ ಕಾಂಗ್ರೆಸ್ ಈಗ ಲಖಿಂಪುರ ಖೇರಿಯಲ್ಲಿ ನಡೆದ ರೈತರ ಮೇಲಿನ ದಾಳಿಯನ್ನೂ ಖಂಡಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು ಪ್ರತಿಭಟನೆ ಶುರು ಮಾಡಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ