ಲಕ್ನೋ: ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ ಅಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ.
ರಸ್ತೆ ಅಪಘಾತ ಕಡಿಮೆ ಮಾಡುವ ಮತ್ತು ದ್ವಿಚಕ್ರ ವಾಹನಗಳ ಅಪಘಾತದಿಂದ ಸಂಭವಿಸುವ ಸಾವು-ನೋವಿನ ಪ್ರಮಾಣ ಕಡಿಮೆ ಮಾಡಲು ಸಾರಿಗೆ ಇಲಾಖೆ ಈ ನೂತನ ಕ್ರಮ ಕೈಗೊಂಡಿದೆ.
Advertisement
Advertisement
ಬೈಕ್ ಸವಾರ ಮಾತ್ರವಲ್ಲ, ಹಿಂಬದಿ ಸವಾರರೂ ಹೆಲ್ಮೆಟ್ ಧರಿಸಿರಬೇಕು. ಇಲ್ಲದಿದ್ದರೆ ಪೆಟ್ರೋಲ್ ಹಾಕಬೇಡಿ ಅಂತ ಉತ್ತರ ಪ್ರದೇಶದ ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ಸಾರಿಗೆ ಇಲಾಖೆ ಪತ್ರ ಬರೆದಿದೆ. ಅಲ್ಲದೇ, 75 ಡಿಸಿಗಳಿಗೆ ಈ ಬಗ್ಗೆ ನಿಗಾವಹಿಸುವಂತೆ ಆದೇಶಿಸಿದೆ.
Advertisement
ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಪರಿಶೀಲನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ನಿರ್ದೇಶನಗಳನ್ನು ಇದು ಎತ್ತಿ ತೋರಿಸುತ್ತದೆ.
Advertisement
ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 25,000-26,000 ಜೀವಗಳು ಬಲಿಯಾಗುತ್ತಿವೆ ಎಂದು ಮುಖ್ಯಮಂತ್ರಿ ಗಮನಿಸಿದ್ದರು.