-
ಓರ್ವ ಶಂಕಿತ ಅರೆಸ್ಟ್
ಲಕ್ನೋ: ಕಿವಿ ಕೇಳಿಸದ, ಮಾತು ಸಹ ಬಾರದ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ರಾಂಪುರ್‌ನಲ್ಲಿ ನಡೆದಿದೆ. ಒಂದಕ್ಕಿಂತ ಹೆಚ್ಚು ಆರೋಪಿಗಳಿಂದ ಕೃತ್ಯ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ವೈದ್ಯಕೀಯ ಪರೀಕ್ಷೆ (Medical Examination) ನಡೆಸಿದ ಬಳಿಕ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಹಾಗೂ ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟ ಗುರತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಶಂಕಿತನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ನಾನು ಅವನನ್ನೇ ಮದ್ವೆಯಾಗ್ತೀನಿ – ಭಾವಿ ಅಳಿಯನೊಂದಿಗೆ ಓಡಿಹೋಗಿದ್ದ ಯುಪಿ ಮಹಿಳೆ ಪಟ್ಟು
ವೈದ್ಯಕೀಯ ಪರೀಕ್ಷೆ ನಡೆಸಿದ ಡಾ. ಅಂಜು ಸಿಂಗ್ ಅವರು, ಇದು ಒಂದಕ್ಕಿಂತ ಹೆಚ್ಚಿನ ವ್ಯಕ್ತಿಗಳು ನಡೆಸಿದ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳಿವೆ, ಆಕೆಯ ಮುಖಕ್ಕೆ ಬಲವಾಗಿ ಹೊಡೆದಿರುವುದರಿಂದ ಮುಖ ಊದಿಕೊಂಡಿದೆ, ಅಲ್ಲದೇ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿರುವ ಗುರುತುಗಳಿವೆ. ಅಷ್ಟಲ್ಲದೇ ಹುಡುಗಿಯ ಬಟ್ಟೆ ಪೂರ್ತಿ ರಕ್ತದ ಕಲೆಗಳಿಂದ ಕೂಡಿತ್ತು ಎಂದು ವಿವರಿಸಿದ್ದಾರೆ.
ಸದ್ಯ ವೈದ್ಯಕೀಯ ಪರೀಕ್ಷೆ ಪೂರ್ಣಗೊಳಿಸಲಾಗಿದೆ. ಬಾಲಕಿ ಭಯಭೀತಳಾಗಿದ್ದರಿಂದ ಆಕೆಯನ್ನ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗಿದೆ. ಕೃತ್ಯ ನಡೆದಾಗಿನಿಂದ ಬಾಲಕಿಗೆ ಆತಂಕಗೊಂಡಾಗಲೆಲ್ಲ ಫಿಟ್ಸ್ ಬರುತ್ತಿದೆ ಎಂದು ಆಕೆಯ ತಾಯಿ ಅಳಲು ತೋಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿ ಪತ್ನಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ರಿಯಲ್ ಎಸ್ಟೇಟ್ ಉದ್ಯಮಿ
ಘಟನೆ ನಡೆದಿದ್ದು ಹೇಗೆ?
ಮೂಲಗಳ ಪ್ರಕಾರ, ರಾಂಪುರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ರೈತನ ಮಗಳಾಗಿರುವ ಸಂತ್ರಸ್ತೆ ಮಂಗಳವಾರ ಸಂಜೆ ಹೊಲಕ್ಕೆ ಹೋಗಿದ್ದಳು. ಈ ವೇಳೆ ನಾಪತ್ತೆಯಾಗಿದ್ದಳು. ಮರುದಿನ ಅದೇ ಹೊಲದ 500 ಮೀ ದೂರದಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗ್ರಾಮ್ ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ಮುಖ ಊದಿಕೊಂಡು, ಬಾಲಕಿ ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತನಿಖೆ ಪ್ರಾರಂಭಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ಮೂರು ತಂಡಗಳನ್ನ ರಚನೆ ಮಾಡಿದ್ದಾರೆ. ಓರ್ವ ಶಂಕಿತನನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಮುಂದುವರಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್