ಲಕ್ನೋ: ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ (Hostel) ಸಿಬ್ಬಂದಿ ವೀಡಿಯೋ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ (Kanpur) ನಡೆದಿದೆ.
ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯರು (Girl Students) ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
Advertisement
Advertisement
ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋಗಳು ಹೆಚ್ಚಾಗಿವೆ ಎಂದು ಆರೋಪಿಸಲಾಗಿತ್ತು. ಹಾಸ್ಟೆಲ್ ಕಟ್ಟಡದ ಸ್ಕೈಲೈಟ್‌ನಿಂದ ಉದ್ಯೋಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇದನ್ನೂ ಓದಿ: RSSನ ಕೂದಲನ್ನು ಸಹ ಮುಟ್ಟಲು ಸಾಧ್ಯವಿಲ್ಲ – ಸಿದ್ದರಾಮಯ್ಯಗೆ ಬಿ.ವೈ.ರಾಘವೇಂದ್ರ ತಿರುಗೇಟು
Advertisement
Advertisement
ಈ ಘಟನೆಯು ವಾರಗಳ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ವಿವಾದದ ಬಳಿಕ ನಡೆದಿದೆ. ಚಂಡೀಗಢ ವಿವಿಯ ವಿದ್ಯಾರ್ಥಿನಿಯರ ಹಾಸ್ಟೆಲ್‌ನಿಂದ ವೀಡಿಯೋ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು. ಇದನ್ನೂ ಓದಿ: ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ