ಲಕ್ನೋ: ಉತ್ತರ ಪ್ರದೇಶದ (Uttar Pradesh) ಗೋರಖ್‌ಪುರದ ಜನದಟ್ಟಣೆಯ ಮಾರುಕಟ್ಟೆಯಲ್ಲಿ ಬುಧವಾರ ತನ್ನ ಹೆಂಡತಿಯನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಮತಾ ಚೌಹಾಣ್ (33) ಕೊಲೆಯಾದ ಮಹಿಳೆ. ವಿಶ್ವಕರ್ಮ ಚೌಹಾಣ್ ಹತ್ಯೆ ಆರೋಪಿ. ವಿಚ್ಛೇದನ ಕುರಿತು ಪತ್ನಿಯೊಂದಿಗೆ ಜಗಳ ತೆಗೆದು ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ
ಈ ದಂಪತಿ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ 13 ವರ್ಷದ ಮಗಳು ಇದ್ದಾಳೆ. ‘ಪತ್ನಿಯನ್ನು ಹತ್ಯೆ ಮಾಡಿರುವುದಕ್ಕೆ ನನಗೆ ಯಾವುದೇ ಪಶ್ಚಾತ್ತಾಪ ಇಲ್ಲ. ನನ್ನ ಹಣವನ್ನೆಲ್ಲ ತಿಂದು ತೇಗಿದ್ದಾಳೆ’ ಎಂದು ವಿಚಾರಣೆ ವೇಳೆ ಆರೋಪಿ ಹೇಳಿಕೆ ನೀಡಿದ್ದಾನೆ.
ಮಮತಾ ಚೌಹಾಣ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ತನ್ನ ಪತಿಯಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸಿಸುತ್ತಿದ್ದಳು. ವಿಚ್ಛೇದನ ವಿಚಾರವಾಗಿ ಇಬ್ಬರ ನಡುವೆಯೂ ಜಗಳವಾಗಿದೆ. ಅಂಗಡಿಯೊಂದರ ಬಳಿ ನಡೆದ ತೀವ್ರ ವಾಗ್ವಾದದ ನಂತರ, ಚೌಹಾಣ್ ಪಿಸ್ತೂಲನ್ನು ಹೊರತೆಗೆದು ಆಕೆಯ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ವೀಡಿಯೋ ರೆಕಾರ್ಡ್ – ದೆಹಲಿಯಲ್ಲಿ ಪೈಲಟ್ ಬಂಧನ
ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೃತ ಮಹಿಳೆ ಮಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಅಮ್ಮನಿಗೆ ಅಪ್ಪ ಕಿರುಕುಳ ನೀಡುತ್ತಿದ್ದ, ಅಕ್ರಮ ಸಂಬಂಧ ಹೊಂದಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ.