ಲಕ್ನೋ: ರಾಜ್ಯದಲ್ಲಿ ಬಿಜೆಪಿ ಪಕ್ಷವು ಮುಂದಿನ ಐದು ವರ್ಷಗಳಲ್ಲಿ ಪ್ರತಿ ಕುಟುಂಬದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ಅವಕಾಶಗಳನ್ನು ಒದಗಿಸಲು ಯೋಜಿಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಗೋರಖ್‍ಪುರದ ಚೌರಿ ಚೌರಾದಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ಪ್ರತಿ ಕುಟುಂಬದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ನಾವು ಯೋಜಿಸುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಐದನೇ ಹಂತದ ಮತದಾನ ಅಯೋಧ್ಯೆ, ಸುಲ್ತಾನ್‍ಪುರ, ಚಿತ್ರಕೂಟ, ಪ್ರತಾಪ್‍ಗಢ, ಕೌಶಾಂಬಿ, ಪ್ರಯಾಗ್‍ರಾಜ್, ಬಾರಾಬಾಕಿ, ಬಹ್ರೈಚ್, ಶ್ರಾವಸ್ತಿ, ಗೊಂಡಾ, ಅಮೇಥಿ ಮತ್ತು ರಾಯ್‍ಬರೇಲಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಐದು ಹಂತಗಳ ಮತದಾನ ಈಗಾಗಲೇ ಮುಕ್ತಾಯಗೊಂಡಿದೆ. ಉಳಿದ ಎರಡು ಹಂತಗಳ ಮತದಾನ ಮಾರ್ಚ್ 3 ಮತ್ತು ಮಾರ್ಚ್ 7 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್ ಇನ್ನೂ ಕೈವಶವಾಗಿಲ್ಲ ಯಾಕೆ?