ಲಕ್ನೋ: ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಇದ್ದಳು ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಈ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಯುವತಿಗೆ ಥಳಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಇದೀಗ ಮಹಿಳಾ ಪೊಲೀಸನ್ನ ಕೆಲಸದಿಂದ ವಜಾ ಮಾಡಲಾಗಿದೆ.
Advertisement
Advertisement
ವಿಡಿಯೋದಲ್ಲೇನಿದೆ?:
ಯುವತಿಯನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಯುವತಿ ಮಹಿಳಾ ಪೊಲೀಸ್ ಪಕ್ಕದಲ್ಲೇ ಕುಳಿತಿದ್ದಾಳೆ. ಈ ವೇಳೆ ಪೊಲೀಸ್ ಕಾನ್ಸ್ ಸ್ಟೇಬಲ್, ಯುವತಿಗೆ ಅಸಭ್ಯ ಶಬ್ಧಗಳಿಂದ ಬೈದು, ದೈಹಿಕ ಹಿಂಸೆ ನೀಡಿದ್ದಾಳೆ. ಅಲ್ಲದೇ ನೀನ್ಯಾಕೆ ಮುಸ್ಲಿಂ ಯುವಕನನ್ನು ಫ್ರೆಂಡ್ ಮಾಡಿಕೊಂಡಿದ್ದೀಯಾ ಅಂತ ಪ್ರಶ್ನಿಸಿದ್ದಾಳೆ. ಈ ಎಲ್ಲಾ ಘಟನೆಗಳನ್ನು ವಾಹನದಲ್ಲಿ ಅವರಿಬ್ಬರ ಎದುರು ಕುಳಿತಿದ್ದ ಪೊಲೀಸ್ ವಿಡಿಯೋ ಮಾಡಿದ್ದು, ಆ ಬಳಿಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Advertisement
Meerut: Three police personnel including a woman constable suspended after a video of them abusing and slapping a woman for being friends with a Muslim man, went viral pic.twitter.com/ypqO5dxFbK
— ANI UP/Uttarakhand (@ANINewsUP) September 25, 2018
Advertisement
ಅಲ್ಲದೇ ವಿಡಿಯೋ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಆಕ್ರೋಶವ್ಯಕ್ತವಾಗಿತ್ತು. ಯುವತಿಯ ಮೇಲೆ ಕೈ ಮಾಡಿದ್ದ ಮಹಿಳಾ ಪೊಲೀಸ್ ಕಾನ್ಸ್ ಸ್ಟೇಬಲ್ ವಿರುದ್ಧ ಟ್ವಿಟ್ಟಿಗರು ಕಿಡಿಕಾರಿದ್ದರು.
`ಈವರೆಗೆ ಕೋಮುವಾದದ ಬೀಜ ಬಿತ್ತುತ್ತವೆ ಅಂತ ರಾಜಕೀಯ ಪಕ್ಷಗಳ ವಿರುದ್ಧ ಮಾತನಾಡುತ್ತಿದ್ದೆವು. ಆದ್ರೆ ಇದೀಗ ಪಕ್ಷಗಳಿಗಿಂತ ಪೊಲೀಸರೇ ಕೋಮವಾದದ ಬೀಜ ಬಿತ್ತುತ್ತಿದ್ದಾರೆ. ಹೀಗಾಗಿ ಯುವತಿ ಮೇಲೆ ಕೈ ಮಾಡಿದ್ದ ಮಹಿಳಾ ಪೊಲೀಸ್ ಕಾನ್ಸ್ ಸ್ಟೇಬಲ್ ವಿರುದ್ಧ ಕ್ರಮಕೈಗೊಳ್ಳಬೇಕು. ಹಾಗೆಯೇ ಈ ಪ್ರಕರಣಕ್ಕೆ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರು ಮಧ್ಯಪ್ರವೇಶಿಸಬೇಕು’ ಅಂತ ಟ್ವಿಟ್ಟಗನೊಬ್ಬ ಬೇಡಿಕೆ ಇಟ್ಟಿದ್ದಾನೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv