ತಂದೆ, ಚಿಕ್ಕಪ್ಪನೊಂದಿಗೆ ಅಖಿಲೇಶ್ ಯಾದವ್ ಭರ್ಜರಿ ಚುನಾವಣಾ ಪ್ರಚಾರ

Public TV
2 Min Read
Akhilesh Yadav 2

ಲಕ್ನೋ: ವಿಧಾನಸಭೆ ಮೂರನೇ ಹಂತದ ಚುನಾವಣೆ ಸಮೀಸುತ್ತಿದ್ದಂತೆ ಸಮಾಜವಾದಿ ಪಕ್ಷದ (ಎಸ್‍ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಐದು ವರ್ಷಗಳ ನಂತರ ಅವರ ತಂದೆ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರೊಂದಿಗೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

2017ರ ವಿಧಾನಸಭೆ ಚುನಾವಣೆಗೆ ಮುನ್ನ ಲಕ್ನೋದಲ್ಲಿ ‘ಸಮಾಜವಾದಿ ವಿಕಾಸ ರಥ’ದಲ್ಲಿ ಅಕ್ಟೋಬರ್ 2016 ರಲ್ಲಿ ಮೂವರು ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 2016ರಲ್ಲಿ ಕೌಟುಂಬಿಕ ಕಲಹದಿಂದ ಅಖಿಲೇಶ್ ಮತ್ತು ಅವರ ಚಿಕ್ಕಪ್ಪ ಶಿವಪಾಲ್ ಬೇರೆಯಾದರು. ನಂತರ ಶಿವಪಾಲ್ ಯಾದವ್ ನಂತರ ತಮ್ಮದೇ ಆದ ಪ್ರಗತಿಶೀಲ ಸಮಾಜವಾದಿ ಪಕ್ಷವನ್ನು (ಲೋಹಿಯಾ) ಸ್ಥಾಪಿಸಿದರು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಪಿಎಸ್‍ಪಿ ರಾಜ್ಯದಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

Akhilesh Yadavada

ಇದೀಗ ಯಾದವ್ ಮತ್ತು ಶಿವಪಾಲ್ ಯಾದವ್ ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಸರಿಪಡಿಕೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಆದರೆ ಅಂದಿನಿಂದ ಇಬ್ಬರೂ ನಾಯಕರು ಎಲ್ಲೂ ಒಟ್ಟಿಗೆ ವೇದಿಕೆ ಮೇಲೆ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಎಸ್ಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಇಟಾವಾದಲ್ಲಿ ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ಇಬ್ಬರೂ ಒಟ್ಟಿಗೆ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಪರಸ್ಪರ ಒಪ್ಪಿಕೊಂಡಿದ್ದಾರೆ. ಅಂಕಲ್ (ಶಿವಪಾಲ್ ಸಿಂಗ್ ಯಾದವ್) ಮತ್ತೆ ವಾಪಸ್ಸಾಗಿರುವುದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಯುಪಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ನಮಗೆ ಸಹಾಯಕವಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

Akhilesh Yadav

ಗುರುವಾರ ಸಮಾಜವಾದಿ ಪಕ್ಷದ “ಸಮಾಜವಾದಿ ವಿಜಯ ರಥ” ಲಯನ್ ಸಫಾರಿ ಇಟಾವಾದಿಂದ ಪ್ರಾರಂಭಿಸಲಾಯಿತು. ಈ ವೇಳೆ ಶಿವಪಾಲ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷ ಮತ್ತು ಅದರ ಮೈತ್ರಿಗಾಗಿ ಪ್ರಚಾರ ಮಾಡಿದರು. ಇನ್ನೂ ಅಖಿಲೇಶ್ ಯಾದವ್ ತಮ್ಮ ಚೊಚ್ಚಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೈನ್‍ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಲ್ಲಿ ಮುಲಾಯಂ ಯಾದವ್ ಕೂಡ ರ್ಯಾಲಿ ನಡೆಸಿದರು. ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ

ಫೆಬ್ರವರಿ 10 ಮತ್ತು 14 ರಂದು ಎರಡು ಹಂತಗಳ ಮತದಾನ ಮುಗಿದಿದ್ದು, ಉಳಿದ ಐದು ಹಂತದ ಮತದಾನ ಫೆಬ್ರವರಿ 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *