ಮರಕ್ಕೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ 6 ಮಂದಿ ಸಾವು

Public TV
1 Min Read
UP ACCIDENT

ಲಕ್ನೋ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಜನ ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ (Shravasti) ಜಿಲ್ಲೆಯ ಇಕೌನಾದ (Ikauna) ರಾಷ್ಟ್ರೀಯ ಹೆದ್ದಾರಿ 730 (NH 730)ರಲ್ಲಿ ಶನಿವಾರ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಉಳಿದ ಎಂಟು ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಬಹ್ರೈಚ್ (Bahraich) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳದಿಂದ ಜೆಸಿಬಿ ಬಳಸಿ ತೆಗೆಯಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ-ಪುಣೆ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 12 ಸಾವು

ವಾಹನದಲ್ಲಿದ್ದ ಪ್ರಯಾಣಿಕರು ಸಭೆಯಲ್ಲಿ ಭಾಗವಹಿಸಲು ಲುಧಿಯಾನದಿಂದ (Ludhiana) ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  (Yogi Adityanath) ಅವರು ಅಪಘಾತದಲ್ಲಿ ಪ್ರಾಣಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಪ್ರೇಯಸಿಯ ಬರ್ತ್‌ಡೇ ಕೇಕ್ ಕತ್ತರಿಸಿ ಬಳಿಕ ಕತ್ತನ್ನೂ ಕೊಯ್ದ ಪಾಗಲ್ ಪ್ರೇಮಿ

Share This Article