ಲಕ್ನೋ: ಉತ್ತರ ಪ್ರದೇಶದ (Uttar Pradesh) ಮುಜಾಫರ್‌ನಗರದ ಕಾಲೇಜಿನಲ್ಲಿ ಬುರ್ಕಾ (Burqa) ಧರಿಸಿ ವಿದ್ಯಾರ್ಥಿನಿಯರು ರ‍್ಯಾಂಪ್ ವಾಕ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರ ವಿರುದ್ಧ ಮುಸ್ಲಿಂ ಸಂಘಟನೆಯೊಂದು ಗರಂ ಆಗಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.
ಕೆಲವು ವಿದ್ಯಾರ್ಥಿನಿಯರು ತಮ್ಮ ಸೃಜನಶೀಲತೆ ಪ್ರದರ್ಶಿಸಲು ಹಾಗೂ ವಿವಿಧತೆಯಲ್ಲಿ ಏಕತೆ ಸಂದೇಶ ಸಾರುವ ದೃಷ್ಟಿಯಿಂದ ಕಾಲೇಜಿನಲ್ಲಿ ಬುರ್ಕಾ ಧರಿಸಿ ರ‍್ಯಾಂಪ್ ವಾಕ್ ಮಾಡಿದ್ದರು. ಆದರೆ ಈ ಬೆಳವಣಿಗೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಗೆಳೆಯನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ಅಂಜು ತವರಿಗೆ ವಾಪಸ್
Advertisement
Advertisement
ಬುರ್ಕಾವು “ಪರ್ದಾ” (ಹೊದಿಕೆ) ಬಟ್ಟೆಯಾಗಿದೆ. ಫ್ಯಾಷನ್ ಶೋಗೆ ಬಳಸುವ ವಸ್ತುವಲ್ಲ ಎಂದು ಜಮಿಯತ್ ಉಲಮಾದ ಪ್ರತಿನಿಧಿ ತಿಳಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಪರ ನಿಂತಿದೆ. ದಾರುಲ್ ಉಲೂಮ್‌ನ ಪ್ರತಿನಿಧಿಯಿಂದ ಬೆಂಬಲ ವ್ಯಕ್ತವಾಗಿದೆ. ಫ್ಯಾಷನ್ ಶೋ ಒಂದು ರೀತಿಯ ಪ್ರಾತಿನಿಧ್ಯ ಎಂದು ಕಾಲೇಜು ತಿಳಿಸಿದೆ.
Advertisement
ಭಾನುವಾರ ಮುಜಾಫರ್‌ನಗರದ ಶ್ರೀರಾಮ ಕಾಲೇಜಿನಲ್ಲಿ ನಡೆದ ಫ್ಯಾಷನ್ ಶೋನ ವಿಡಿಯೋ ವೈರಲ್ ಆದ ನಂತರ ವಿವಾದ ಭುಗಿಲೆದ್ದಿದೆ. ಫ್ಯಾಷನ್ ಸ್ಪ್ಲಾಶ್ ಎಂಬ ಮೂರು ದಿನಗಳ ಈವೆಂಟ್‌ನಲ್ಲಿ ವಿದ್ಯಾರ್ಥಿಗಳು ಪಾಶ್ಚಾತ್ಯ ಮತ್ತು ಸಾಂಪ್ರದಾಯಿಕ ಉಡುಗೆಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಗುಂಪು ಬುರ್ಕಾಗಳನ್ನು ಧರಿಸಿ ರಾಂಪ್‌ನಲ್ಲಿ ನಡೆದರು. ಫ್ಯಾಷನ್ ಡಿಸೈನ್ ಓದುತ್ತಿರುವ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಲಿವುಡ್‌ನ ಮಾಜಿ ನಟ ಹಾಗೂ ಕಿರುತೆರೆ ನಟರೊಬ್ಬರು ಉಪಸ್ಥಿತರಿದ್ದರು. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆ ಬೆನ್ನಲ್ಲೇ ಭಾವುಕರಾಗಿದ್ದ ಪ್ರಧಾನಿ ಮೋದಿ
Advertisement
ವಿಡಿಯೋ ವೈರಲ್ ಆದ ನಂತರ ಪ್ರತಿಕ್ರಿಯಿಸಿದ ಜಮೀಯತ್ ಉಲಮಾದ ಜಿಲ್ಲಾ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ, ಕಾಲೇಜು ಧರ್ಮವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಕಾಲೇಜಿನವರು ಕ್ಷಮೆಯಾಚಿಸದಿದ್ದರೆ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ ಎಚ್ಚರಿಸಿದ್ದಾರೆ.
ಈ ಘಟನೆಯನ್ನು ಖಂಡಿಸುತ್ತೇವೆ. ಬುರ್ಕಾ ಫ್ಯಾಷನ್‌ನ ವಸ್ತುವಲ್ಲ. ಅದನ್ನು ಪರ್ದಾಕ್ಕೆ ಬಳಸಲಾಗುತ್ತದೆ. ಇದು ಮುಸ್ಲಿಂ ಮಹಿಳೆಯರ ಘನತೆ ಮತ್ತು ಗೌರವದ ಸಂಕೇತವಾಗಿದೆ ಎಂದು ಬುರ್ಕಾವನ್ನು ಧರಿಸಲಾಗುತ್ತದೆ. ಇದರಿಂದ ಮಹಿಳೆಯರು ತಪ್ಪು ಉದ್ದೇಶಗಳನ್ನು ಹೊಂದಿರುವ ಪುರುಷರ ನೋಟವನ್ನು ತಪ್ಪಿಸಬಹುದು. ನಿರ್ದಿಷ್ಟ ಧರ್ಮವನ್ನು ಗುರಿಯಾಗಿಟ್ಟುಕೊಂಡು ಇನ್ನೊಬ್ಬರ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಕಾಲೇಜು ಅಧಿಕಾರಿಗಳು ಯೋಗ್ಯವಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ – ಸಂಪುಟ ಸಭೆಯಲ್ಲಿ ಮೋದಿ ಮಹತ್ವದ ನಿರ್ಧಾರ
ಕಾಲೇಜಿನ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಒಂದು ವೇಳೆ ಕೇಳದಿದ್ದರೆ, ಕಾನೂನು ಕ್ರಮ ತೆಗೆದುಕೊಳ್ಳಲು ನಾವು ಹಿಂಜರಿಯುವುದಿಲ್ಲ. ಅವರು ಯಾವುದೇ ಧರ್ಮದ ಅನುಯಾಯಿಗಳಿಗೆ ಮತ್ತೆ ಈ ರೀತಿ ಮಾಡಬಾರದು ಎಂದು ಮೌಲಾನಾ ಹೇಳಿದ್ದಾರೆ.