ಲಕ್ನೋ: ದೇಶಿ ನಿರ್ಮಿತ ಪಿಸ್ತೂಲ್ ಹೊಂದಿದ್ದ ಮಹಿಳೆಯೊಬ್ಬಳನ್ನು ಉತ್ತರ ಪ್ರದೇಶದ ಮೈನ್‍ಪುರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಕರಿಷ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದ್ದು, ಈಕೆ ಫಿರೋಜಾಬಾದ್‍ನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಆದರೆ ಕೆಲವು ಕೆಲಸಗಳ ಮೇಲೆ ಮಂಗಳವಾರ ಮೈನ್ಪುರಿಗೆ ಬಂದಿದ್ದಳು. ಈ ವೇಳೆ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬರು ಪಿಸ್ತೂಲ್ ಹಿಡಿದುಕೊಂಡು ಹೋಗುತ್ತಿರುವ ಬಗ್ಗೆ ಮಾಹಿತಿ ದೊರೆತ ಬಳಿಕ ಕರಿಷ್ಮಾ ಸಿಂಗ್ ಯಾದವ್‍ರನ್ನು ಹಿಂಬಾಲಿಸಿ ಪತ್ತೆ ಹಚ್ಚಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ
ಮಹಿಳಾ ಪೇದೆಯೊಬ್ಬರು ಆರೋಪಿಯನ್ನು ಪರೀಕ್ಷಿಸಿ, ಆಕೆ ಧರಿಸಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್‍ನ ಜೇಬಿನಿಂದ 315 ಬೋರ್ ಕಂಟ್ರಿಮೇಡ್ ಪಿಸ್ತೂಲ್ ಹೊರತೆಗೆದಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸದ್ಯ ಕರಿಷ್ಮಾ ಸಿಂಗ್ ಯಾದವ್ ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡು, ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೀಗ ಆಕೆ ಆಯುಧವನ್ನು ಏಕೆ ಸಾಗಿಸುತ್ತಿದ್ದಳು ಎಂದು ತಿಳಿಯಲು ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೈನ್‍ಪುರಿ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಬಿ.ಎಸ್ ಯಡಿಯೂರಪ್ಪ ಭೇಟಿಯಾದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್