ಲಕ್ನೋ: ಉತ್ತರ ಪ್ರದೇಶದ (Uttar Pradesh) ಮುಜಾಫರ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗೆ (Muslim Student) ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಶಾಲಾ ಮಕ್ಕಳಿಗೆ ಹೇಳುತ್ತಿರುವ ದೃಶ್ಯದ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಶಿಕ್ಷಕಿ ನಡೆಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಶಿಕ್ಷಕಿ ತೃಪ್ತಿ ತ್ಯಾಗಿ ವೀಡಿಯೋ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಅವರಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಕಿ, ಇದೊಂದು ಸಣ್ಣ ಸಮಸ್ಯೆ, ಆದ್ರೆ ಘಟನೆಗೆ ಕೋಮು ದೃಷ್ಟಿಕೋನ (Communal Angle) ನೀಡಲಾಗುತ್ತಿದೆ. ಆ ಹುಡುಗ ಹೋಮ್‌ವರ್ಕ್ ಮಾಡಿರಲಿಲ್ಲ. ನಾನು ಅಂಗವಿಕಲೆಯಾದ್ದರಿಂದ ಎದ್ದೇಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಮತ್ತೊಬ್ಬ ವಿದ್ಯಾರ್ಥಿಗೆ ಅವನ ಕೆನ್ನೆಗೆ ಒಂದು ಬಾರಿಸು ಅಂತಾ ಹೇಳಿದೆ. ಈ ವೇಳೆ ತರಗತಿಯಲ್ಲಿ ಕುಳಿತಿದ್ದ ಮಗುವಿನ ಸೋದರ ಸಂಬಂಧಿ ವೀಡಿಯೋ ರೆಕಾರ್ಡ್ ಮಾಡಿದ್ದಾನೆ. ಆದ್ರೆ ವೀಡಿಯೋವನ್ನ ಎಡಿಟ್ ಮಾಡಿದ್ದು, ಕೋಮು ಬಣ್ಣ ಹಚ್ಚಲಾಗಿದೆ ಎಂದು ಹೇಳಿದ್ದಾರೆ.
ಇದೊಂದು ಸಣ್ಣ ಸಮಸ್ಯೆ, ನನ್ನ ತಪ್ಪಿದ್ದರೆ ನಾನು ಒಪ್ಪಿಕೊಳ್ಳುತ್ತೇನೆ. ನಾನು ಇದನ್ನ ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ಕೆಲವರು ಅನಗತ್ಯವಾಗಿ ದೊಡ್ಡದು ಮಾಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಇತರ ರಾಜಕೀಯ ನಾಯಕರಿಗೂ ನಾನು ಹೇಳಬಯಸುತ್ತೇನೆ. ಇದು ಟ್ವೀಟ್ ಮಾಡುವಷ್ಟು ದೊಡ್ಡ ವಿಷಯವೇನಲ್ಲ. ದಿನನಿತ್ಯದ ವಿಷಯಗಳನ್ನೂ ಈ ರೀತಿ ವೀಡಿಯೋ ಮಾಡಿ ವೈರಲ್ ಮಾಡಿದ್ರೇ ಶಿಕ್ಷಕರು ಪಾಠ ಕಲಿಸೋದಾದ್ರೂ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಿಂದ ಪಾಠ ಕಲಿತ ಬಿಜೆಪಿ ಹೈಕಮಾಂಡ್ – ಮಧ್ಯಪ್ರದೇಶದಲ್ಲಿ ಮಾಡಿದ ಬದಲಾವಣೆ ಏನು?
ಏನಿದು ಘಟನೆ?
ಉತ್ತರ ಪ್ರದೇಶದ ಮುಜಾಫರ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಹೇಳಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸುವುದಾಗಿ ಪೊಲೀಸರು ತಿಳಿಸಿದ್ದರು. ಹುಡುಗ ಮುಸ್ಲಿಂ ಸಮುದಾಯದವನು. ಶಿಕ್ಷಕಿ ಕ್ರಮವು ಕೋಮುವಾದಿ ಸ್ವರೂಪದ್ದಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ವೀಡಿಯೋದಲ್ಲಿ ಶಿಕ್ಷಕಿ ಕೋಮುವಾದಿ ಪದಗಳನ್ನೂ ಬಳಸಿದ್ದು, ಪೊಲೀಸರೂ ಇದನ್ನು ಖಚಿತಪಡಿಸಿದ್ದಾರೆ.
ಗಣಿತ ಕೋಷ್ಟಕಗಳನ್ನು ಕಲಿಯದ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಮಹಿಳಾ ಶಿಕ್ಷಕಿ ಹೊಡೆಸಿರುವ ದೃಶ್ಯದ ವೀಡಿಯೋ ಗಮನಿಸಿದ್ದೇವೆ. ವೀಡಿಯೋದಲ್ಲಿನ ಆಕ್ಷೇಪಾರ್ಹ ಕಾಮೆಂಟ್ ಬಗ್ಗೆ ನಾವು ಶಾಲೆಯ ಪ್ರಾಂಶುಪಾಲರೊಂದಿಗೆ ಮಾತನಾಡಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತ್ ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಿನ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಹೊತ್ತಿ ಉರಿದ ಬೆಂಕಿ – 10 ಮಂದಿ ಸಾವು
ಮುಸ್ಲಿಂ ಮಹಿಳೆಯರೇ ತಮ್ಮ ಮಕ್ಕಳ ಶೈಕ್ಷಣಿಕ ಕುಸಿತಕ್ಕೆ ಕಾರಣ ಎಂದು ವೀಡಿಯೋದಲ್ಲಿ ಶಿಕ್ಷಕಿ ಹೇಳಿಕೆ ನೀಡಿದ್ದಾರೆ. ನಾವು ಮೂಲ ಶಿಕ್ಷಣ ಅಧಿಕಾರಿಗೆ ತಿಳಿಸಿದ್ದೇವೆ. ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಹಕ್ಕುಗಳ ಸಂಸ್ಥೆಯು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆದೇಶಿಸಿದೆ. ಶಾಲೆಯ ಅಧಿಕಾರಿಗಳೊಂದಿಗೆ ರಾಜಿ ಮಾಡಿಕೊಂಡಿರುವುದರಿಂದ ಶಾಲೆಯ ವಿರುದ್ಧ ಆರೋಪ ಹೊರಿಸುವುದಿಲ್ಲ. ನನ್ನ ಮಗನನ್ನು ಈ ಶಾಲೆಗೆ ಕಳುಹಿಸುವುದಿಲ್ಲ. ಶಾಲೆ ನಮ್ಮ ಶುಲ್ಕವನ್ನು ಹಿಂದಿರುಗಿಸಿದೆ. ಈ ವಿಷಯವನ್ನು ಮುಂದುವರಿಸುವುದು ಬಯಸುವುದಿಲ್ಲ ಎಂದು ಬಾಲಕನ ತಂದೆ ತಿಳಿಸಿದ್ದಾರೆ.
Web Stories