ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!

Public TV
1 Min Read
MEERUT

ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ (Uttar Pradesh’s Meerut) ನಡೆದಿದೆ.

ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಹೋದರಿಯ ಮೆಹಂದಿ ಕಾರ್ಯಕ್ರಮವಿತ್ತು. ಈ ವೇಳೆ ರಿಮ್ಶಾ ಮೃತಪಟ್ಟಿದ್ದಾಳೆ. ಇದೀಗ ರಿಮ್ಶಾ ಡ್ಯಾನ್ಸ್ ಮಾಡುತ್ತಾ ಕುಸಿದು ಬೀಳುತ್ತಿರುವ‌ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮದುವೆಗೂ ಮುನ್ನ ನಡೆಯುವ ಮೆಹಂದಿ ಕಾರ್ಯಕ್ರಮದಲ್ಲಿ ರಿಮ್ಶಾ ತನ್ನ ಕುಟುಂಬ ಸದಸ್ಯರೊಂದಿಗೆ ಡ್ಯಾನ್ಸ್‌ ಮಾಡುತ್ತಿರುತ್ತಾಳೆ. ಆದರೆ ಕೆಲವೇ ಸೆಕೆಂಡುಗಳಲ್ಲಿ ಆಕೆಗೆ ತಲೆಸುತ್ತು ಬಂದಂತೆ ಆಗಿದ್ದು, ಎದೆ ಹಿಡಿದುಕೊಂಡು ಅಲ್ಲೇ ಇದ್ದ ಪುಟ್ಟ ಹುಡುಗನ ಕೈ ಹಿಡಿದುಕೊಳ್ಳಲು ಪ್ರಯತ್ನಿಸುತ್ತಾಳೆ. ನಂತರ ಅಲ್ಲೇ ಕುಸಿದು ಬೀಳುತ್ತಾಳೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣರನ್ನ ಪಕ್ಷದಿಂದ ಅಮಾನತು ಮಾಡಿ- ಹೆಚ್‌ಡಿಡಿಗೆ ಕಂದಕೂರು ಒತ್ತಾಯ

ರಿಮ್ಶಾ ಬೀಳುತ್ತಿದ್ದಂತೆಯೇ ಕಾರ್ಯಕ್ರಮ ಬಂದ ಕೆಲವರು ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸುತ್ತಾರೆ. ಆಕೆಗೆ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ನೀರವ ಮೌನ ಆವರಿಸಿದೆ.

Share This Article