Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

Cricket

WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

Public TV
Last updated: March 21, 2023 11:31 pm
Public TV
Share
2 Min Read
WPL2023 DCvsUPW 2
SHARE

ಮುಂಬೈ: ಸಂಘಟಿತ‌ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಯುಪಿ ವಾರಿಯರ್ಸ್‌ (UP Warriorz) ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ನೇರವಾಗಿ WPL ಫೈನಲ್‌ ಪ್ರವೇಶಿಸಿದೆ.

ಮಂಗಳವಾರ ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದ ಲೀಗ್‌ ಸುತ್ತಿನ ಕೊನೆಯ ಪಂದ್ಯದಲ್ಲಿ ಜಯ ದಾಖಲಿಸುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದು, ನೇರವಾಗಿ ಫೈನಲ್‌ ಪ್ರವೇಶಿಸಿದೆ. ಕ್ರಮವಾಗಿ 2-3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್‌ ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸಲಿವೆ. ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. ಇದನ್ನೂ ಓದಿ: WPL 2023: ಮುಂಬೈಗೆ ಜಯ – RCB ಸೋಲಿನ ವಿದಾಯ

WPL2023 DCvsUPW 4

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ವಾರಿಯರ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿತ್ತು. 139‌ ರನ್‌ ಗುರಿ ಪಡೆದ ಡೆಲ್ಲಿ 17.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಿ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

WPL2023 DCvsUPW

ಆರಂಭಿಕರಾಗಿ ಕಣಕ್ಕಿಳಿದ ನಾಯಕಿ ಮೆಗ್‌ ಲ್ಯಾನಿಂಗ್‌ (Meg Lanning), ಶಫಾಲಿ ವರ್ಮಾ ಉತ್ತಮ ಆರಂಭ ನೀಡಿದರು. ಶಫಾಲಿ 16 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 21 ರನ್‌ ಗಳಿಸಿದರೆ, ಮೆಗ್‌ ಲ್ಯಾನಿಂಗ್‌ 23 ಎಸತೆಗಳಲ್ಲಿ 39 ರನ್‌ (5 ಬೌಂಡರಿ, 2 ಸಿಕ್ಸರ್‌) ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಅಲಿಸ್‌ ಕ್ಯಾಪ್ಸಿ 34 ರನ್‌ (4 ಬೌಂಡರಿ, 1 ಸಿಕ್ಸರ್‌) ಗಳಿಸಿದರೆ, ಆಲ್‌ರೌಂಡರ್‌ ಮಾರಿಜಾನ್ನೆ ಕಪ್‌ 31 ಎಸೆತಗಳಲ್ಲಿ 34 ರನ್‌ (4 ಬೌಂಡರಿ, 1 ಸಿಕ್ಸರ್‌) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

WPL2023 DCvsUPW 1

ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ 20 ಓವರ್‌ಗಳಲ್ಲಿ ಯುಪಿ ವಾರಿಯರ್ಸ್ ತಂಡ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಪರವಾಗಿ ತಹಿಲಾ ಮೆಕ್‌ಗ್ರಾಥ್ ಅಜೇಯ 58 ರನ್‌ ಗಳಿಸಿ ಏಕಾಂಗಿ ಹೋರಾಟ ನಡೆಸಿದರು. ಇದರೊಂದಿಗೆ ನಾಯಕಿ ಅಲಿಸ್ಸಾ ಹೀಲಿ ಅವರ 36 ರನ್‌ಗಳ ಕೊಡುಗೆ ತಂಡಕ್ಕೆ ನೆರವಾಯಿತು. ಉಳಿದಂತೆ ಯಾರೊಬ್ಬರೂ ಸ್ಥಿರವಾಗಿ ನಿಲ್ಲದ ಕಾರಣ ವಾರಿಯರ್ಸ್‌ ತಂಡ ಸಾಧಾರಣ ಮೊತ್ತವನ್ನಷ್ಟೇ ಗಳಿಸಲು ಶಕ್ತವಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ಅಲಿಸ್‌ ಕ್ಯಾಪ್ಸಿ 3 ವಿಕೆಟ್ ಕಿತ್ತರೆ, ರಾಧಾ ಯಾದವ್ 2 ವಿಕೆಟ್, ಜೆಸ್ ಜೊನಾಸನ್‌ 1 ವಿಕೆಟ್‌ ಪಡೆದು ಮಿಂಚಿದರು.

TAGGED:Alyssa HealyDCvsUPWDelhi CapitalsJemimah RodriguesMarizanne KappMeg LanningUP Warriorzಅಲಿಸ್ಸಾ ಹೀಲಿಕ್ರಿಕೆಟ್ಡಬ್ಲ್ಯೂಪಿಎಲ್‌ಡೆಲ್ಲಿ ಕ್ಯಾಪಿಟಲ್ಸ್ಮಾರಿಜಾನ್ನೆ ಕಪ್‌ಮೆಗ್‌ ಲ್ಯಾನಿಂಗ್‌ಯುಪಿ ವಾರಿಯರ್ಸ್‌ಶಫಾಲಿ ವರ್ಮಾ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

donald trump 1
Latest

ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

Public TV
By Public TV
43 minutes ago
siddaramaiah 1 5
Latest

ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು: ಸಿದ್ದರಾಮಯ್ಯ

Public TV
By Public TV
53 minutes ago
kea
Bengaluru City

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
1 hour ago
S Jaishankar
Latest

ಐರಿಸ್ ಲವನ್‌ಗೆ ಆಶ್ರಯ ನೀಡಿದ್ದನ್ನು ಸಮರ್ಥಿಸಿಕೊಂಡ ಎಸ್.ಜೈಶಂಕರ್

Public TV
By Public TV
2 hours ago
Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
3 hours ago
TVK Vijay and sangeeta
Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?