ಗರ್ಭಪಾತದ ವೇಳೆ ಮೃತಪಟ್ಟ ಮಹಿಳೆ: ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋದ ಪ್ರಿಯಕರ!

Advertisements

ಲಕ್ನೋ: ಗರ್ಭಪಾತದ ವೇಳೆ ಮೃತಪಟ್ಟ ಮಹಿಳೆಯ ಮೃತದೇಹವನ್ನು ಆಕೆಯ ಪ್ರಿಯಕರ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

Advertisements

ಸೆಪ್ಟೆಂಬರ್ 18 ರಂದು ಮುಜಾಫರ್ ನಗರದ ಅರಣ್ಯ ಪ್ರದೇಶದ ಬಳಿ ಅನುಮಾನಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದರ ವಿಚಾರಣೆಯನ್ನು ಕೈಗೆತ್ತಿಕೊಂಡಾಗ ಮೃತ ಮಹಿಳೆ ಕುತುಬ್‍ಪುರ್ ಗ್ರಾಮದ ಆಸ್ಮಿನ್ ಎಂದು ತಿಳಿದು ಬಂದಿತ್ತು. ಅಲ್ಲದೇ ಮಹಿಳೆ ಗರ್ಭಪಾತದ ವೇಳೆ ಮೃತಪಟ್ಟಿದ್ದಾರೆಂದು ಜಿಲ್ಲಾ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಮಾಹಿತಿ ನೀಡಿದ್ದರು.

Advertisements

ಘಟನೆಗೆ ಸಂಬಂಧಿಸಿದಂತೆ ಆಸ್ಮಿನ್ ಪ್ರಿಯಕರ ಹುಸೇನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಆಸ್ಮಿನ್ ಗರ್ಭಪಾತದ ಸಂದರ್ಭದಲ್ಲಿ ಸಾವನ್ನಪ್ಪಿದ್ದಳು. ಹೀಗಾಗಿ ಆಕೆಯ ಮೃತದೇಹವನ್ನು ಕಾಡಿನಲ್ಲಿ ಎಸೆದು ಹೋಗಿದ್ದಾಗಿ ಹುಸೇನ್ ಪೊಲೀಸರ ಬಳಿ ಬಾಯಿಬಿಟ್ಟಿದ್ದಾನೆ.

ಘಟನೆ ಸಂಬಂಧ ಬಂಧಿತ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 304ಎ (ನಿರ್ಲಕ್ಷ್ಯದಿಂದ ಉಂಟುಮಾಡಿದ ಸಾವು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Advertisements
Advertisements
Exit mobile version