– ಕ್ಯೂನಲ್ಲಿ ಹೆಚ್ಚು ಹೊತ್ತು ನಿಂತು ಸುಸ್ತಾಗಿದ್ದರು
– ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ
ಲಕ್ನೋ: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಸರ್ಕಾರ ನೀಡುತ್ತಿರುವ ಉಚಿತ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಯೊಂದರ ಮುಂದೆ ಕ್ಯೂನಲ್ಲಿ ನಿಂತಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ಈ ಘಟನೆ ನಡೆದಿದ್ದು ಇಮದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಕ್ಯೂನಲ್ಲಿ ನಿಂತಿದ್ದ ವೇಳೆ ಮಹಿಳೆ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ವಿತರಣಾ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿದ್ದೇವು. ಆದರೆ ಅಷ್ಟರಲ್ಲಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ತಿಳಿಸಿದ್ದಾರೆ.
Advertisement
Advertisement
ಸದ್ಯ ಪೊಲೀಸರು ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆದರೆ ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳೀಯರು ಕೂಡ ಹೀಗೆ ಹೇಳುತ್ತಿದ್ದಾರೆ. ಇನ್ನೂ ಕೆಲವರು ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾಗಿ ಇಂಟರ್‌ನೆಟ್ ಸಿಗುತ್ತಿರಲಿಲ್ಲ. ಆದ್ದರಿಂದ ಪಡಿತರ ವಿತರಣೆ ತಡವಾಯ್ತು. ಬಹುಶಃ ಇದರಿಂದಲೇ ಮಹಿಳೆ ಸುಸ್ತಾಗಿ ಕುಸಿದು ಬಿದ್ದಿದ್ದರು ಎಂದು ತಿಳಿಸಿದ್ದಾರೆ.
Advertisement
ಈ ಹಿನ್ನೆಲೆ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ಸೂಚಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಈ ಬಗ್ಗೆ ಸ್ಪಷ್ಟವಾಗಲಿದೆ ಎಂದು ಡಿಸಿ ಹೇಳಿದ್ದಾರೆ.