ಲಕ್ನೋ: ವ್ಯಕ್ತಿಯೊಬ್ಬ ತನ್ನ ಸೋದರ ಸಂಬಂಧಿಯೊಂದಿಗೆ ಸೇರಿ ಪತ್ನಿಯನ್ನು ಅತ್ಯಾಚಾರ ಎಸಗಿದ್ದಲ್ಲದೇ, ವರದಕ್ಷಿಣೆ ನೀಡದಿದ್ದಕ್ಕೆ ತ್ರಿವಳಿ ತಲಾಖ್ ನೀಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ.
ಆರೋಪಿಯಾಗಿರುವ ಸಂತ್ರಸ್ತೆ ಪತಿ ಲಕ್ನೋ ಮೂಲದ ಮೊಹಮ್ಮದ್ ಅದ್ನಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಸೋದರ ಸಂಬಂಧಿ ತಲೆಮರೆಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಸಿಧು ಮೂಸೆ ವಾಲಾ ಮುಖವನ್ನ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡ ತಂದೆ
ನನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ವರದಕ್ಷಿಣೆಗಾಗಿ ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಪತಿಯ ಕಿರುಕುಳ ತಾಳಲಾರದೇ ಮಹಿಳೆ ತನ್ನ ತಾಯಿಯ ಮನೆಗೆ ಹೋಗಿದ್ದರು. ನಂತರ ಅದ್ನಾನ್ ಮತ್ತು ಆತನ ಸೋದರ ಸಂಬಂಧಿ ಅತ್ತೆಯ ಮನೆಗೆ ಹೋಗಿದ್ದಾರೆ. ಮಹಿಳೆ ಒಬ್ಬಂಟಿಯಾಗಿ ಇರುವುದನ್ನು ಕಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಆಕಾಶ್ ತೋಮರ್ ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಸಿರಿಂಜ್ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್
ಅದ್ನಾನ್ ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.