ಲಕ್ನೋ: ವೈದ್ಯರು ತಂಬು ಗರ್ಭಿಣಿಯನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿಸಿದ ಪರಿಣಾಮ ಕೊನೆಗೆ ರಸ್ತೆ ಬದಿಯಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ ಮನಕಲಕುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.
ಈ ಘಟನೆ ಮಂಗಳವಾರ ಉತ್ತರಪ್ರದೇಶದ ಶ್ರವಸ್ತಿ ಜಿಲ್ಲೆಯ ಭಿಂಗಾ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಸುನಿತಾ ಎಂದು ಗುರುತಿಸಲಾಗಿದ್ದು, ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ.
Shravasti: Woman gave birth to a child at roadside y'day in Bhinga. Her husband alleges that the hospital they first went to, referred her to Dist Hospital from where they were sent to Bahraich&then to Lucknow. DM (pic 2) says 'We're investigating. Probe committee formed' (28.08) pic.twitter.com/kheehtba5v
— ANI UP/Uttarakhand (@ANINewsUP) August 28, 2018
ಘಟನೆ ವಿವರ:
ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಕೆಯನ್ನು ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಭಿಂಗಾ ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅಲ್ಲಿಂದ ಬಹ್ರಾಯ್ಚ್ ಗೆ ಕರೆದೊಯ್ಯುವಂತೆ ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಆದ್ರೆ ಆ ಸಂದರ್ಭದಲ್ಲಿ ನನ್ನ ಕೈಯಲ್ಲಿ ಬೇಕಾದಷ್ಟು ಹಣ ಇರಲಿಲ್ಲ. ಹೀಗಾಗಿ ನನ್ನ ಪತ್ನಿ ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಅಂತ ಪತಿ ರಮೇಶ್ ವಿವರಿಸಿದ್ದಾರೆ.
ಘಟನೆ ಸಂಬಂಧ ತನಿಖೆ ನಡೆಸುವಂತೆ ಶ್ರವಸ್ತಿ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ಅವರು ಆದೇಶಿಸಿದ್ದಾರೆ. ಮಹಿಳೆಯೊಬ್ಬರು ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿರುವ ಬಗ್ಗೆ ಸುದ್ದಿ ಕೇಳಿದ್ದೇವೆ. ಹೀಗಾಗಿ ಘಟನೆ ಸಂಬಂಧ ಶೀಘ್ರವೇ ತನಿಖೆ ನಡೆಸುವಂತೆ ಈಗಾಗಲೇ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv