Uttar Pradesh| 6 ಮಕ್ಕಳ ಮಹಾತಾಯಿ ಭಿಕ್ಷುಕನೊಂದಿಗೆ ಪರಾರಿ

Public TV
1 Min Read
beggars 5

ಲಕ್ನೋ: ಗಂಡ ಮತ್ತು 6 ಮಕ್ಕಳೊಂದಿಗೆ ಸಂಸಾರ ಮಾಡುತ್ತಿದ್ದ ಮಹಾತಾಯಿಯೊಬ್ಬಳು ಭಿಕ್ಷುಕನೊಂದಿಗೆ (Beggar) ಪರಾರಿಯಾದ ಘಟನೆ ಉತ್ತರ ಪ್ರದೇಶದ (Uttar Pradesh) ಹರ್ದೋಯ್ (Hardoi) ಜಿಲ್ಲೆಯಲ್ಲಿ ನಡೆದಿದೆ.

ಸುಮಾರು 36 ವರ್ಷದ ಮಹಿಳೆ ರಾಜೇಶ್ವರಿ ಗಂಡ ಮತ್ತು ಮಕ್ಕಳೊಂದಿಗೆ ಸುಖೀ ಜೀವನ ನಡೆಸುತ್ತಿದ್ದಳು. ಆದರೆ ಭಿಕ್ಷೆ ಕೇಳುವ ನೆಪದಲ್ಲಿ ಆಗಾಗ ಮನೆ ಬಳಿ ಬರುತ್ತಿದ್ದ ಭಿಕ್ಷುಕನ ಮೇಲೆ ಪ್ರೇಮಾಂಕುರವಾಗಿ ಗಂಡ ಮತ್ತು ಮಕ್ಕಳನ್ನು ಬಿಟ್ಟು ಭಿಕ್ಷುಕನೊಂದಿಗೆ ಮಹಿಳೆ ಪರಾರಿಯಾಗಿದ್ದಾಳೆ. ಇದನ್ನೂ ಓದಿ: ಎದುರಾಳಿಗಳಿಗೆ ಮೊದಲ ಚೆಕ್‌ಮೆಟ್‌ – ಡಿನ್ನರ್‌ ಪಾಲಿಟಿಕ್ಸ್‌ಗೆ ಡಿಕೆಶಿ ಬ್ರೇಕ್‌

ಮಗಳಿಗೆ ಬಟ್ಟೆ ಹಾಗೂ ತರಕಾರಿ ತರುತ್ತೇನೆ ಎಂದು ಹೇಳಿ ಪತಿ ಎಮ್ಮೆ ಮಾರಿ ಗಳಿಸಿದ್ದ ಹಣವನ್ನು ತೆಗೆದುಕೊಂಡು ಮಾರ್ಕೆಟ್‌ಗೆ ತೆರಳಿದ ರಾಜೇಶ್ವರಿ ಏಕಾಏಕಿ ನಾಪತ್ತೆಯಾಗಿದ್ದಳು. ಪತ್ನಿ ಕಾಣಿಸದೇ ಆತಂಕಗೊಂಡ ಪತಿ ರಾಜು ಪೊಲೀಸ್ ಮೊರೆ ಹೋಗಿದ್ದಾರೆ. ತನ್ನ ಪತ್ನಿಯನ್ನು ಯಾರೋ ಅಪಹರಿಸಿದ್ದಾರೆ ಎಂದು ರಾಜು ದೂರು ನೀಡಿದ್ದರು. ಪತಿಯ ದೂರು ಆಧರಿಸಿ ತನಿಖೆಗಿಳಿದ ಪೊಲೀಸರ ಎದುರು ಸತ್ಯದ ಅನಾವರಣವಾಗಿದೆ. ಇದನ್ನೂ ಓದಿ: Kolar| ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ಪೊಲೀಸರ ತನಿಖೆ ವೇಳೆ ನಾಪತ್ತೆಯಾಗಿದ್ದ ರಾಜೇಶ್ವರಿ ನನ್ಹೇ ಪಂಡಿತ್ ಎಂಬ ಹೈಟೆಕ್ ಭಿಕ್ಷುಕನೊಂದಿಗೆ ಪತ್ತೆಯಾಗಿದ್ದಾಳೆ. ಈತ ಭಿಕ್ಷೆಯ ನೆಪದಲ್ಲಿ ಆಗಾಗಾ ಮನೆಯ ಮುಂದೆ ಬಂದು ರಾಜೇಶ್ವರಿ ಜೊತೆ ಮಾತುಕತೆ ನಡೆಸುತ್ತಿದ್ದ. ಈ ವೇಳೆ ಮಹಿಳೆಗೆ ಈತನ ಮೇಲೆ ಪ್ರೀತಿಯಾಗಿದೆ. ಅಲ್ಲದೇ ಭಿಕ್ಷುಕ ಮೊಬೈಲ್ ಹೊಂದಿದ್ದರಿಂದ ಇಬ್ಬರೂ ಪರಸ್ಪರ ನಂಬರ್ ಶೇರ್ ಮಾಡಿಕೊಂಡು ಮೊಬೈಲ್‌ನಲ್ಲೇ ಮಾತುಕತೆ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೈತರಿಗೆ, ಬೆಂಗಳೂರಿಗರಿಗೆ ಸಿಹಿ ಸುದ್ದಿ – ಜನವರಿಯಲ್ಲೂ ಕೆಆರ್‌ಎಸ್‌ ಡ್ಯಾಂ ಭರ್ತಿ, ದಾಖಲೆ ನಿರ್ಮಾಣ

Share This Article