ಲಕ್ನೋ: ಸಾಲ ತೀರಿಸಿ ಎಂದಿದ್ದಕ್ಕೆ ದಂಪತಿ ಮೇಲೆ ಗುಂಡು ಹಾರಿಸಲಾಗಿದ್ದು, ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಮತ್ತು ಆಕೆಯ ಪತಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಪತಿ ಮತ್ತು ಪತ್ನಿ ದೇವಾಲಯದಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ದಂಪತಿ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿದ್ದಾರೆ. ಭೂಮಿ ಬದಲಾಗಿ ನೀಡಿದ್ದ ಹಣವನ್ನು ಮರಳಿ ನೀಡುವಂತೆ ಕೇಳಿದ ಕಾರಣಕ್ಕೆ ಮಹಿಳೆ ಹಾಗೂ ಆಕೆಯ ಪತಿ ಮೇಲೆ ಗುಂಡು ಹಾರಿಸಲಾಗಿದೆ ಎಂದು ದಂಪತಿಯ ಸಂಬಂಧಿಕರೊಬ್ಬರು ಆರೋಪಿಸಿದ್ದಾರೆ. ಇದನ್ನೂ ಓದಿ: SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ
ಘಟನೆ ಬಳಿಕ ಕೂಡಲೇ ಪತಿ ಹಾಗೂ ಪತ್ನಿ ಇಬ್ಬರನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮಹಿಳೆ ಮೃತಪಟ್ಟಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಪೊಲೀಸರು ಜಿಲ್ಲಾಸ್ಪತ್ರೆಗೆ ಆಗಮಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲು ಆರಂಭಿಸಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್ ಟೀಕೆ