ಲಕ್ನೋ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾಕ್ಕೆ ಉತ್ತರ ಪ್ರದೇಶದ ಸರ್ಕಾರ (UttarPradesh Government) ತೆರಿಗೆ ಮುಕ್ತ (Tax Free) ಪ್ರಸಾರಕ್ಕೆ ಅನುಮತಿ ನೀಡುವುದಾಗಿ ಹೇಳಿದೆ.
Advertisement
ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದಲ್ಲಿ ʻದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಪ್ರಸಾರ ನಿಷೇಧಿಸಿದ ಒಂದು ದಿನದ ನಂತರ ಯೋಗಿ ಆದಿತ್ಯನಾಥ್ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ವಿಶೇಷ ಪ್ರದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಸಚಿವ ಸಂಪುಟದ ಸದಸ್ಯರೂ ಚಲನಚಿತ್ರ ವೀಕ್ಷಣೆ ಮಾಡುವ ಸಾಧ್ಯತೆಗಳಿವೆ ಎಂದು ಎಂದು ಆಪ್ತ ಮೂಲಗಳು ತಿಳಿಸಿವೆ.
Advertisement
Advertisement
‘ದಿ ಕೇರಳ ಸ್ಟೋರಿ’ (The Kerala Story) ಚಿತ್ರವನ್ನು ತಮಿಳುನಾಡು ಸರ್ಕಾರ ನಿಷೇಧ ಮಾಡಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳ (West Bengal) ಸರ್ಕಾರವೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವುದನ್ನ ನಿಷೇಧಿಸಿತ್ತು. ಸರ್ಕಾರದ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: The Kerala Story ಬಂದ್ಮೇಲೆ ಇಸ್ಲಾಂಗೆ 32 ಸಾವಿರ ಮಹಿಳೆಯರ ಮತಾಂತರ – ಗಂಭೀರ ಆರೋಪ
Advertisement
ಬಹುತೇಕ ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ತೆರಿಗೆ ವಿನಾಯಿತಿಯನ್ನೂ ಘೋಷಣೆ ಮಾಡಿವೆ. ಆದರೂ, ಪಶ್ಚಿಮ ಬಂಗಾಳ ಸರ್ಕಾರ ಈ ರೀತಿ ಸಿನಿಮಾವೊಂದನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಬಿಜೆಪಿ (BJP) ಪ್ರತಿಕ್ರಿಯಿಸಿದೆ. ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನೂ ಕೊಟ್ಟಿದೆ. ದ್ವೇಷ ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ಪಶ್ಚಿಮ ಬಂಗಾಳ ಸರ್ಕಾರವು ಕೇರಳ ಸ್ಟೋರಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಅದಾ ಶರ್ಮಾ (Adah Sharma) ಮುಖ್ಯಭೂಮಿಕೆಯ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ನಿಷೇಧ : ಪ್ರತಿಭಟನೆಗೆ ಇಳಿದ ಬಿಜೆಪಿ