ನವದೆಹಲಿ: ಜನಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ 2010ರಲ್ಲಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು 2013ರಲ್ಲಿ ಯಪಿಎ ಸರ್ಕಾರ ತಿರಸ್ಕರಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ.
ಲಿಂಗಾಯತ ಸಮುದಾಯವು 4 ಕೋಟಿಗೂ ಅಧಿಕ ಸಂಖ್ಯೆಯ ಅನುಯಾಯಿಗಳನ್ನು ಒಳಗೊಂಡಿದ್ದು, ಬೌದ್ಧ, ಸಿಖ್ ಹಾಗೂ ಜೈನ ಧರ್ಮದ ಅನುಯಾಯಿಗಳಿಗಿಂತ ಅಧಿಕ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ. ಹೀಗಾಗಿ ಜಾತಿಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮವನ್ನು ಸೂಚಿಸುವ ಪ್ರತ್ಯೇಕ ಕಾಲಂ, ಸಾಲು ಹಾಗೂ ಕೋಡ್ ಸಂಖ್ಯೆ ನಮೂದಿಸಿ, ಜನಗಣತಿಯ ಅರ್ಜಿ ನಮೂನೆ ಮುದ್ರಿಸುವಂತೆ ವೀರಶೈವ ಮಹಾಸಭಾ ಕೇಳಿಕೊಂಡಿತ್ತು.
Advertisement
ಈ ಮನವಿಯನ್ನು ತಿರಸ್ಕರಿಸಿದ್ದ ಕಾಂಗ್ರೆಸ್ ನೇತೃತ್ವದ ಯಪಿಎ ಸರ್ಕಾರ ವೀರಶೈವ ಮತ್ತು ಲಿಂಗಾಯತ ಸಮುದಾಯವು ಹಿಂದೂ ಧರ್ಮದ ಒಂದು ಪಂಗಡ ಎಂದು ಹೇಳಿತ್ತು. ಕೇಂದ್ರದ ಗೃಹ ಕಚೇರಿಯ ಕೋರಿಕೆಯ ಮೇರೆಗೆ ಪರಿಶೀಲನೆ ನಡೆಸಿದ್ದ ಭಾರತೀಯ ರಿಜಿಸ್ಟ್ರಾರ್ ಜನರಲ್ ಕಚೇರಿಯು 2013ರ ನವೆಂಬರ್ 14ರಂದು `ವೀರಶೈವ ಮಹಾಸಭಾದ ಪ್ರತ್ಯೇಕ ಧರ್ಮ ಸ್ಥಾನಮಾನದ ಬೇಡಿಕೆಯು ಅತಾರ್ಕಿಕವಾದದ್ದು’ ಎಂದು ಅಭಿಪ್ರಾಯಪಟ್ಟಿತ್ತು.
Advertisement
ಈ ಸಂಬಂಧ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸುದ್ದಿಗೋಷ್ಠಿ ನಡೆಸಿ, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ 2013ರಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಶಿಫಾರಸನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು ಎಂದು ಹೇಳಿದರು.
Advertisement
ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶಕ್ಕಾಗಿ ಈ ವಿಷಯವನ್ನು ಬಳಸಿಕೊಳ್ಳುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಅವರು ದೂರಿದರು .
Advertisement
#CongDeceivesHindus: TIMES NOW accesses the exclusive letter which was written by Veerappa Moily in 2013 to Centre for giving religion tag to Lingayat community but was rejected by the UPA Government pic.twitter.com/KqVVbpctmh
— TIMES NOW (@TimesNow) March 20, 2018