ಸ್ಟಾರ್ ನಟ ಉಪೇಂದ್ರ ಅವರು UI ಸಿನಿಮಾದ ಕೆಲಸದ ನಡುವೆಯೇ ರಜನಿಕಾಂತ್ (Rajanikanth) ನಟನೆಯ ಕೂಲಿ ಸಿನಿಮಾದಲ್ಲಿಯೂ ನಟಿಸುತ್ತಾ ಇದ್ದಾರೆ. ಇದರ ನಡುವೆ ‘ಯುಐ’ ಚಿತ್ರದ ವಾರ್ನರ್ (ಟ್ರೈಲರ್) ತಲೈವಾಗೆ ಉಪೇಂದ್ರ ತೋರಿಸಿದ್ದಾರಾ? ಎಂಬುದರ ಬಗ್ಗೆ ನಟ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:UI ಚಿತ್ರ ‘ಸೂಪರ್’ ಸಿನಿಮಾದ ಮುಂದುವರೆದ ಭಾಗನಾ?- ಉಪೇಂದ್ರ ಹೇಳೋದೇನು?
ಇಂದು (ಡಿ.2) ನಡೆದ UI ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಮಾತನಾಡಿ, ‘ಕೂಲಿ’ (Coolie) ಸಿನಿಮಾದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾಗ ಯುಐ ವಾರ್ನರ್ ಸಿದ್ಧವಾಗಿರಲಿಲ್ಲ. ಮುಂದಿನ ಶೆಡ್ಯೂಲ್‌ಗಾಗಿ ಸೆಟ್ ಹೋದಾಗ ರಜನಿಕಾಂತ್‌ಗೆ ‘ಯುಐ’ ವಾರ್ನರ್, ಗ್ಲಿಂಪ್ಸ್ ತೋರಿಸುತ್ತೇನೆ ಎಂದು ಉಪೇಂದ್ರ ಮಾತನಾಡಿದ್ದಾರೆ. ಇನ್ನೂ ಕೂಲಿ ಸಿನಿಮಾದಲ್ಲಿ ಉಪೇಂದ್ರಗೆ ಉತ್ತಮ ಪಾತ್ರ ಸಿಕ್ಕಿದೆ. ಪವರ್‌ಫುಲ್ ಪಾತ್ರದಲ್ಲಿ ನಟ ಕಾಣಿಸಿಕೊಂಡಿದ್ದಾರೆ.
ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.
ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.