ನವದೆಹಲಿ: ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೇಂದ್ರ ಹಣಕಾಸು ಇಲಾಖೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ. ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯು ಸಾರ್ವಜನಿಕರಿಗೆ ಅಪಾರ ಅನುಕೂಲ ಹಾಗೂ ಉತ್ಪಾದಕತೆ ಲಾಭವನ್ನು ತಂದು ಕೊಡುತ್ತಿದೆ. ಯುಪಿಐ ಪಾವತಿಗಳಿಗೆ ಶುಲ್ಕ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ತಿಳಿಸಿದೆ.
Advertisement
The Govt had provided financial support for #DigitalPayment ecosystem last year and has announced the same this year as well to encourage further adoption of #DigitalPayments and promotion of payment platforms that are economical and user-friendly. (2/2)
— Ministry of Finance (@FinMinIndia) August 21, 2022
Advertisement
ಕಳೆದ ವರ್ಷ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸರ್ಕಾರ ಹಣಕಾಸಿನ ನೆರವನ್ನು ನೀಡಿದೆ. ಈ ಸಾಲಿನಲ್ಲೂ ಬಳಕೆದಾರ ಸ್ನೇಹಿ ಡಿಜಿಟಲ್ ಪಾವತಿ ಉತ್ತೇಜಿಸಲು ಮತ್ತಷ್ಟು ನೆರವನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಕೇಜ್ರಿವಾಲ್ ಅವರೇ ದೆಹಲಿ ಮದ್ಯ ಅಕ್ರಮದ ಕಿಂಗ್‌ಪಿನ್, ಬಂಧನ ಹತ್ತಿರದಲ್ಲೇ ಇದೆ: ಬಿಜೆಪಿ
Advertisement
ಸ್ಪಷ್ಟನೆ ನೀಡಿದ್ದು ಯಾಕೆ?
ದೇಶದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಯುಪಿಐ ಪಾವತಿಗಳಿಗೆ ಆರ್‌ಬಿಐ ಶುಲ್ಕ ವಿಧಿಸಲಿದೆ ಎಂದು ವರದಿಯಾಗಿತ್ತು. ಕೆಲ ದಿನಗಳ ಹಿಂದೆ ಆರ್‌ಬಿಐ ಬಿಡುಗಡೆ ಮಾಡಿದ್ದ ಸಲಹಾ ಪತ್ರದಲ್ಲಿ ಯುಪಿಐ ಸೇರಿದಂತೆ ಆನ್‌ಲೈನ್ ವ್ಯವಸ್ಥೆಗಳ ಮೂಲಕ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೋರಿತ್ತು. ಈ ಹಿನ್ನೆಲೆಯಲ್ಲಿ ಯುಪಿಐ ವಹಿವಾಟಿಗೂ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿತ್ತು.
Advertisement
Make digital payments quickly, securely, reliably, and conveniently with UPI. #UPI #DigitalPayments@GoI_MeitY @_DigitalIndia pic.twitter.com/bcPfo0KEaK
— NPCI (@NPCI_NPCI) August 1, 2022
ಎಷ್ಟು ವಹಿವಾಟು ನಡೆಯುತ್ತಿದೆ?
ಪ್ರತಿ ತಿಂಗಳು ಡಿಜಿಟಲ್ ಪಾವತಿ ಮೂಲಕ ನಡೆಯುವ ವ್ಯವಹಾರ ಹೆಚ್ಚಾಗುತ್ತಿದೆ. ಜೂನ್ ತಿಂಗಳಿನಲ್ಲಿ 5.86 ಶತಕೋಟಿ ವ್ಯವಹಾರ ನಡೆದರೆ ಜುಲೈನಲ್ಲಿ 6.28 ಶತಕೋಟಿ ವ್ಯವಹಾರ ನಡೆದಿತ್ತು.