ಬೆಳಗಾವಿ: ಡಿಕೆ ಶಿವಕುಮಾರ್ (DK Shivakumar) ಪರ್ಸಂಟೇಜ್‌ಗಾಗಿ ನೀರಾವರಿ ಮಂತ್ರಿಯಾಗಿದ್ದಾರೆ (Water Resources Minister) ಎಂದು ಬಿಜೆಪಿ ಶಾಸಕನ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಧಿವೇಶನದ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಯತ್ನಾಳ್ ಬಳಿ ಕೃಷ್ಣ ಮೇಲ್ದಂಡೆ ಯೋಜನೆ (Upper Krishna Project) ಇನ್ನೂ ಪೂರ್ಣಗೊಳ್ಳದ ಬಗ್ಗೆ ಪಬ್ಲಿಕ್ ಟಿವಿ ಕೇಳಿದ ಪ್ರಶ್ನೆಗೆ, ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ನೀರಾವರಿ ಮಂತ್ರಿ ಆಗುವ ಉದ್ದೇಶ ಏನಿತ್ತು? ಪರ್ಸಂಟೇಜ್‌ಗಾಗಿ ಡಿಕೆಶಿ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟದಲ್ಲಿ ಪ್ರತಿಧ್ವನಿಸಿದ ಪ್ರತ್ಯೇಕ ರಾಜ್ಯದ ಕೂಗು
ಕೋವಿಡ್ (Covid) ಬಗ್ಗೆ ಭ್ರಷ್ಟಾಚಾರ ನಡೆದಿದೆ ಎಂದು ಈಗ ಡಿಕೆಶಿ ಮಾತನಾಡುತ್ತಿದ್ದಾರೆ. ಅದೇ ಡಿಕೆ ಶಿವಕುಮಾರ್ ಹಳೆ ಬಿಲ್ಲು ನೀಡಲು 10% ಹಣ ಹೊಡೆಯುತ್ತಿದ್ದಾರೆ. ಬಿಬಿಎಂಪಿಯಲ್ಲಂತೂ ಚದರ ಅಡಿಗಾಗಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಮೇಕೆದಾಟು ಹೋರಾಟ ಹಾರಾಟ ಎಂದೆಲ್ಲಾ ಮಾತನಾಡುತ್ತಿದ್ದ ಡಿಕೆಶಿ ಈ ದಂಡೆಯಿಂದ ಆ ದಂಡೆಗೆ ಹೋಗುವ ಗಿರಾಕಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಗ್ಯಾರಂಟಿಯಿಂದ ದುಡ್ಡು ಇಲ್ಲದೇ ಇದ್ರೆ ಸರ್ಕಾರಿ ಆಸ್ತಿ ಮಾರಿ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ: ಎಸ್.ಆರ್ ಪಾಟೀಲ್ ಆಕ್ರೋಶ
40 ಸಾವಿರ ಕೋಟಿ ಕೊಡುತ್ತೇವೆ. ಭಾರೀ ಅನುದಾನ ನೀಡುತ್ತೇವೆ ಎಂದು ಉತ್ತರ ಕರ್ನಾಕಟದ (North Karnataka) ಬಗ್ಗೆ ಕೇವಲ ಡೈಲಾಗ್ ಹೊಡೆಯುತ್ತಾರೆ ಬಿಟ್ಟರೆ ನಿಜವಾದ ಕಾಳಜಿ ಇವರಿಗೆ ಇಲ್ಲ. ಉತ್ತರ ಕರ್ನಾಟಕದವರು ನೀರಾವರಿ ಮಂತ್ರಿಯಾಗುವುದಿಲ್ಲ. 60 ವರ್ಷಗಳಿಂದ ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಂಡಿಲ್ಲ. ಈ ಯೋಜನೆ ಪೂರ್ಣಗೊಳ್ಳದೇ ಇರಲು ಎಲ್ಲಾ ಸರ್ಕಾರಗಳು ಕಾರಣ. ಬೊಮ್ಮಾಯಿ, ಕಾರಜೋಳ, ಹೆಚ್‌ಕೆ ಪಾಟೀಲ್, ಎಂಬಿ ಪಾಟೀಲ್ ಇದ್ದಾಗ ಸ್ವಲ್ಪ ಸ್ವಲ್ಪ ಕೆಲಸ ಮಾಡಿದ್ದಾರೆ. ಸರ್ಕಾರ ಬಜೆಟ್‌ನಲ್ಲಿ ಹಣ ಇಡದೇ ಇದ್ದರೆ ಪಾಪ ಅವರು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನ ಎದುರು ಡಿ.3 ರಿಂದ ಸಂತ್ರಸ್ಥರು ಹೋರಾಟ ಆರಂಭಿಸಿದ್ದಾರೆ. ಎಲ್ಲಾ ಪಕ್ಷದ ನಾಯಕರು ಪಕ್ಷಬೇಧ ಮರೆತು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.