ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ (Upper Krishna Project) ಮೂರನೇ ಹಂತದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಆಲಮಟ್ಟಿ ಡ್ಯಾಂ (Almatti Dam) ಎತ್ತರ ಹೆಚ್ಚಳ ಯೋಜನೆ ಸಂಬಂಧ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿಯೆ ವಿಶೇಷ ಸಚಿವ ಸಂಪುಟ ಸಭೆ ಇಂದು ನಡೆದಿದ್ದು ಸಭೆಯಲ್ಲಿ ರೈತರ ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗಿದೆ.
ಮುಳಗಡೆ ವ್ಯಾಪ್ತಿಯಲ್ಲಿ ನೀರಾವರಿ ಜಮೀನಿಗೆ ಎಕರೆಗೆ 40 ಲಕ್ಷ ರೂ., ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ನಿಗದಿ ಮಾಡಲಾಗಿದೆ. ಅದರಂತೆ ಕೆನಾಲ್ ಭಾಗದಲ್ಲಿ ನೀರಾವರಿ ಜಮೀನಿಗೆ ಎಕರೆಗೆ 30 ಲಕ್ಷ ರೂ. ಒಣ ಭೂಮಿಗೆ 25 ಲಕ್ಷ ರೂ. ದರ ನಿಗದಿ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಡ್ಯಾಂ ಎತ್ತರಿಸಲು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್‌ಗೂ ಹೆಚ್ಚಿನ ಜಾಗಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಬರಡು ಭೂಮಿಗೆ ನೀರು ಕೊಟ್ಟಂತೆ ಆಗಲಿದೆ ಎಂದರು. ಇದನ್ನೂ ಓದಿ: ಎಸ್‌ಟಿಗೆ ಕುರುಬ – ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ
2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು.
ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ ಕನ್ಸೆಂಟ್ ಅವಾರ್ಡ್… pic.twitter.com/NL3ut9OgTV
— Siddaramaiah (@siddaramaiah) September 16, 2025
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಇವತ್ತು ಐತಿಹಾಸಿಕ ತೀರ್ಮಾನಕ್ಕೆ ಬಂದಿದ್ದೇವೆ. ಸುಮಾರು ಹತ್ತು ಸುತ್ತಿನ ಸಭೆಗಳು ನಡೆಸಿದ್ದೇವೆ. ಪುನರ್ವಸತಿಗಾಗಿ ಹೊಸ ಪಾಲಿಸಿ, ಪರಿಹಾರ ಪ್ಯಾಕೇಜ್ ಪರ್ಯಾಯ ವ್ಯವಸ್ಥೆಗೆ ತೀರ್ಮಾನ. ಸೆಕ್ಷನ್ 51 ಅನ್ವಯ ಪ್ರಾಧಿಕಾರ ರಚನೆ ಮಾಡಿ ಹಾಲಿ, ನಿವೃತ್ತ ನ್ಯಾಯಾಧೀಶರ ನೇಮಕ ಮಾಡಲಾಗುವುದು ಎಂದು ತಿಳಿಸಿದರು
ಕ್ಯಾಬಿನೆಟ್ ನಿರ್ಧಾರ ಏನು?
519.6 ಮೀಟರ್‌ನಿಂದ 524.25 ಮೀಟರ್‌ಗೆ ಆಲಮಟ್ಟಿ ಡ್ಯಾಮ್ ಎತ್ತರಕ್ಕೆ ತೀರ್ಮಾನ.
ಯೋಜನೆಗೆ ಅಂದಾಜು ಒಟ್ಟು 70 ಸಾವಿರ ಕೋಟಿ ರೂ. ಖರ್ಚು
3 ವರ್ಷದಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ
ಒಟ್ಟು 5 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ
ಒಟ್ಟು 1.33 ಲಕ್ಷ ಎಕರೆ ಜಮೀನು ಯೋಜನೆ ಆಗಲಿದ್ದು 75,532 ಎಕರೆ ಜಾಗ ಮುಳುಗಡೆಯಾಗಲಿದೆ.
ನಾಲೆ ನಿರ್ಮಾಣಕ್ಕೆ ಬೇಕಾದ ಜಾಗ 51,837 ಎಕರೆ
ಪುನರ್ವಸತಿಗಾಗಿ ಬೇಕಾಗಿರುವ ಜಾಗ 6,439 ಎಕರೆ
ಈ ಯೋಜನೆಯಿಂದ ಸ್ಥಳಾಂತರ ಆಗಲಿವೆ 20 ಗ್ರಾಮಗಳು