ನವದೆಹಲಿ: ಯುಪಿಎಸ್‌ಸಿ ಅಧ್ಯಕ್ಷ ಮನೋಜ್ ಸೋನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಮನೋಜ್ ಸೋನಿ ಅವರ ಅಧಿಕಾರವಧಿ 2029ರ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಅವಧಿಗೂ ಮುನ್ನ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಈವರೆಗೂ ಅಂಗೀಕರಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Advertisement
Advertisement
ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿಷಯ ಮುನ್ನೆಲೆಗೆ ಬಂದ ನಂತರ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಸುತ್ತ ವಿವಾದಗಳು ಎದ್ದಿವೆ. ಈ ಪ್ರಕರಣಕ್ಕೂ ಸೋನಿ ಅವರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ.
Advertisement
ಪ್ರಖ್ಯಾತ ಶಿಕ್ಷಣ ತಜ್ಞ ಸೋನಿ ಅವರು 2017 ರ ಜೂನ್ 28 ರಂದು ಆಯೋಗದ ಸದಸ್ಯರಾಗಿ ಅಧಿಕಾರ ವಹಿಸಿಕೊಂಡಿದ್ದರು. 2023 ರ ಮೇ 16 ರಂದು UPSC ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
Advertisement
ಸೋನಿ ಅವರು ಯುಪಿಎಸ್‌ಸಿ ಅಧ್ಯಕ್ಷರಾಗಿ ಮುಂದುವರಿಯಲು ಉತ್ಸುಕರಾಗಿಲ್ಲ. ಸಾಮಾಜಿಕ-ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ವಿನಿಯೋಗಿಸಲು ಬಯಸಿದ್ದಾರೆ.