ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ 2024ನೇ (UPSC 2024) ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಗೆ ಹಾಜರಾಗಿರುವ ಆಕಾಂಕ್ಷಿಗಳು UPSC ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
Advertisement
Advertisement
ಜೂನ್ 16 ರಂದು ಭಾರತದಾದ್ಯಂತ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಯಿತು. ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಆದಾಗ್ಯೂ ಅವರು 2024 ರ ನಾಗರಿಕ ಸೇವೆಗಳ (ಮುಖ್ಯ) ಪರೀಕ್ಷೆಗಾಗಿ ವಿವರವಾದ ಅರ್ಜಿ ನಮೂನೆ-I (DAF-I) ಅನ್ನು ಭರ್ತಿ ಮಾಡಬೇಕು. ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್ ನಾಯಕನ ಸಹೋದರನ ಗುಂಡಿಕ್ಕಿ ಹತ್ಯೆ
Advertisement
Advertisement
ಫಲಿತಾಂಶ ಪರಿಶೀಲಿಸುವ ಹಂತಗಳು:
* ಮೊದಲಿಗೆ, ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ www.upsc.gov.in ಗೆ ಭೇಟಿ ನೀಡಿ.
* ಮುಖಪುಟದಲ್ಲಿ UPSC ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
* ಬಳಿಕ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದಾಗ ಹೊಸ ಪುಟ ತೆರೆಯುತ್ತದೆ.
* ಇಲ್ಲಿ “ಸಲ್ಲಿಸು” ಆಯ್ಕೆಯನ್ನು ಕ್ಲಿಕ್ ಮಾಡಿದರೆ ಫಲಿತಾಂಶಗಳು ಕಾಣುತ್ತದೆ
* ನಂತರ ಡೌನ್ ಲೋಡ್ ಮಾಡಿ. ನಿಮ್ಮ ಭವಿಷ್ಯದ ಅಗತ್ಯಗಳಿಗಾಗಿ ಕಾಪಿಯನ್ನು ಸೇವ್ ಮಾಡಿಟ್ಟುಕೊಳ್ಳಿ.
2024 ರ ಸಿಎಸ್ (ಪಿ) ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ನಾಗರಿಕ ಸೇವೆಗಳ ಪರೀಕ್ಷೆ ಪೂರ್ಣಗೊಂಡ ನಂತರ ಮತ್ತು ಅಂತಿಮ ಫಲಿತಾಂಶಗಳ ಪ್ರಕಟಣೆಯ ನಂತರ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾಗುತ್ತದೆ.