ಗಾಂಧಿನಗರ: ಎಷ್ಟೇ ನಗರ ನಕ್ಸಲರು (Urban Naxals) ಬಂದರೂ ಗುಜರಾತ್ (Gujarat) ರಾಜ್ಯ ಯುವಜನರ ಜೀವನ ನಾಶ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Naredra Modi) ಎಚ್ಚರಿಸಿದರು.
ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ (Gujarat Assembly Polls) ಹಿನ್ನೆಲೆ ಭರೂಚ್ ಜಿಲ್ಲೆಯಲ್ಲಿ ಬೃಹತ್ ಔಷಧೋದ್ಯಾನ ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
Advertisement
Advertisement
ನಗರ ನಕ್ಸಲರು ತಮ್ಮ ರೂಪ ಬದಲಿಸಿಕೊಂಡು ರಾಜ್ಯ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಮುಗ್ಧ ಹಾಗೂ ಶಕ್ತಿಯುತ ಯುವಕರು (Youth) ತಮ್ಮನ್ನು ಅನುಸರಿಸುವಂತೆ ದಾರಿ ತಪ್ಪಿಸುತ್ತಿದ್ದಾರೆ. ಅವರು ಏನೇ ಮಾಡಿದರೂ ನಮ್ಮ ಯುವ ಪೀಳಿಗೆಯನ್ನ ನಾಶಮಾಡಲು ಬಿಡುವುದಿಲ್ಲ. ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿರುವ ಅರ್ಬನ್ ನಕ್ಸಲರ ವಿರುದ್ಧ ನಮ್ಮ ಮಕ್ಕಳಿಗೆ ಈಗಲೇ ಎಚ್ಚರಿಕೆ ನೀಡಬೇಕು. ಅವರು ವಿದೇಶಿ ಶಕ್ತಿಗಳ ಏಜೆಂಟ್‌ಗಳಾಗಿದ್ದಾರೆ. ಗುಜರಾತ್ ಅವರ ವಿರುದ್ಧ ತಲೆ ಕೆಡಿಸಿಕೊಳ್ಳುವುದಿಲ್ಲ, ಅಂಥವರನ್ನು ನಾಶ ಮಾಡುತ್ತದೆ ಎಂದು ಕಿಡಿಕಾರಿದರು.
Advertisement
Advertisement
ಇದೇ ವೇಳೆ 2014ರಲ್ಲಿ ನಾನು ಪ್ರಧಾನಿಯಾಗಿ (Prime Minister) ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕತೆ ವಿಶ್ವದಲ್ಲಿ 10ನೇ ಸ್ಥಾನದಲ್ಲಿತ್ತು. ಆದರೆ ಈಗ 5ನೇ ಸ್ಥಾನದಲ್ಲಿದೆ ಎಂದು ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.