Bengaluru CityDistrictsKarnatakaLatestMain Post

ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

Advertisements

ಬೆಂಗಳೂರು: ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿಕುಮಾರ್, ಬಿಜೆಪಿ ಈಗಲೂ ಸತ್ಯವನ್ನೇ ಹೇಳುತ್ತಿದೆ. ಗೃಹ ಸಚಿವರಿಗೆ ಮಾಹಿತಿ ಕೊರತೆ ಇತ್ತು. ಪ್ರಕರಣ ಗಂಭೀರವಾಗುತ್ತದೆ ಎಂಬ ಕಾರಣಕ್ಕೆ ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ತನಿಖೆ ನಡೆಸಿ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ: ಹೆಚ್‍ಡಿಕೆ

ಪೊಲೀಸ್ ಆಯುಕ್ತರು ಹೇಳಿದ್ದೇನು..?
ಬೈಕ್ ತಾಗಿದ ವಿಚಾರದಲ್ಲಿ ಚಂದ್ರು ಹಾಗೂ ಶಾಹಿದ್ ಎಂಬಾತನೊಂದಿಗೆ ಜಗಳ ಏರ್ಪಟ್ಟಿತ್ತು. ಜಗಳ ವಿಕೋಪಕ್ಕೆ ತೆರಳಿ, ಚಂದ್ರುವಿನ ಬಲ ತೊಡೆಗೆ ಶಾಹಿದ್ ಚೂರಿಯಿಂದ ಇರಿದು ಪರಾರಿಯಾಗಿದ್ದ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಟಿಪ್ಪು ಜಯಂತಿ ಮಾಡಿ ಹತ್ತಾರು ಕೊಲೆಗಳಿಗೆ ದಾರಿ ಮಾಡ್ಕೊಟ್ಟಿದ್ದು ಸಿದ್ದರಾಮಯ್ಯ: ಪ್ರತಾಪ್ ಸಿಂಹ

ಗೃಹಸಚಿವರ ಹೇಳಿಕೆ:
ಚಂದ್ರು ಕೊಲೆ ವಿಚಾರವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಉರ್ದು ಭಾಷೆ ಬಾರದ ಕಾರಣ ಆತನ ಕೊಲೆ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಬಳಿಕ ತಮ್ಮ ಮಾತನ್ನು ತಪ್ಪಾಗಿ ಹೇಳಿದ್ದಾಗಿ ತಿಳಿಸಿ, ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ ಎಂದಿದ್ದರು.

Leave a Reply

Your email address will not be published.

Back to top button