ಕೋಮಲ್ (Komal) ನಟನೆಯ ‘ಗೋವಿಂದಾಯ ನಮಃ’ ಸಿನಿಮಾ ಪ್ಯಾರ್ಗೆ ಆಗ್ಬುಟೈತಿ ಹಾಡಿನ (Song) ಮೂಲಕ ಸಖತ್ ಫೇಮಸ್ ಆಗಿತ್ತು. ಈ ಒಂದು ಹಾಡು ಇಡೀ ಸಿನಿಮಾವನ್ನು ಗೆಲುವಿನ ಅಂಚಿಗೆ ತೆಗೆದುಕೊಂಡು ಹೋಗಿತ್ತು. ಇದೀಗ ಕೋಮಲ್ ಮತ್ತೆ ಅಂಥದ್ದೊಂದು ಪ್ರಯೋಗ ಮಾಡಿದ್ದಾರೆ. ಅವರ ‘ನಮೋ ಭೂತಾತ್ಮ 2’ (Namo Bhutatma 2) ಸಿನಿಮಾದಲ್ಲೂ ಉರ್ದು ಮಿಶ್ರಿತ ಹಾಡೊಂದನ್ನು ಸೇರಿಸಿದ್ದಾರೆ. ಈ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕೇಳುಗರ ಗಮನ ಸೆಳೆದಿದೆ.
ಅಯ್ಯೋ ಅಯ್ಯೋ ಹೆಸರಿನಲ್ಲಿ ಈ ಹಾಡು ಮೂಡಿ ಬಂದಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ (Vijay Prakash) ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಅರುಣ್ ಆಂಡ್ಯೂ ಮ್ಯೂಸಿಕ್ ಮಾಡಿದ್ದಾರೆ. ಸ್ವತಃ ಮುರಳಿ (Murali) ಮಾಸ್ಟರ್ ನೃತ್ಯ ಸಂಯೋಜನೆಯ ಜೊತೆಗೆ ಅವರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಮೊನ್ನೆಯಷ್ಟೇ ಈ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಿನಿಮಾ ಕುರಿತು ಅಂದು ಮಾತನಾಡಿದ್ದ ಕೋಮಲ್, ‘ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ ನಮೋ ಭೂತಾತ್ಮ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ ನಮೋ ಭೂತಾತ್ಮ 2 ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ’ ಎಂದಿದ್ದರು.
2014ರಲ್ಲಿ ನನಗೆ ಕೋಮಲ್ ಅವರು ನಮೋ ಭೂತಾತ್ಮ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ ನಮೋ ಭೂತಾತ್ಮ 2 ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು. ಚಿತ್ರಕ್ಕೆ ನಮೋ ಭೂತಾತ್ಮ 2 ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ. ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.
Web Stories