ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

Public TV
2 Min Read
Urfi Javed 3 1

ವಿಚಿತ್ರ ಫ್ಯಾಷನ್ ನಿಂದಲೇ ಫೇಮಸ್ ಆಗಿರುವ ಹಿಂದಿ ಮಾಜಿ ಬಿಗ್ ಬಾಸ್ ಸ್ಪರ್ಧಿ (Bigg Boss) ಉರ್ಫಿ ಜಾವೇದ್ ಶನಿವಾರ ನಡೆದ ಪಾರ್ಟಿವೊಂದರಲ್ಲಿ ವಿಶೇಷ ಕಾಸ್ಟ್ಯೂಮ್ (Costume) ಧರಿಸಿ ಬಂದಿದ್ದಾರೆ. ಹೃದಯ (Heart) ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದಿದ್ದಾರೆ. ಅನೇಕರು ಉರ್ಫಿ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ. ಈ ಫೋಟೋ ವೈರಲ್ ಕೂಡ ಆಗಿದೆ.

Urfi Javed 2 1

ಅರೆಬರೆ ಉಡುಪು ಧರಿಸುವ ಮೂಲಕವೇ ಫೇಮಸ್ ಆಗಿರುವ ಉರ್ಫಿ ಜಾವೇದ್ (Urfi Javed) ಮೊನ್ನೆಯಷ್ಟೇ ಮೈ ತುಂಬಾ ಬಟ್ಟೆ ಹಾಕಿ ಅಚ್ಚರಿ ಮೂಡಿಸಿದ್ದರು. ವಿಚಿತ್ರ ಬಟ್ಟೆಗಳನ್ನ ಧರಿಸೋದ್ರಲ್ಲಿ ಯಾವಾಗಲೂ ಮುಂದಿದ್ದ ಉರ್ಫಿ ಮೊಟ್ಟ ಮೊದಲ ಬಾರಿಗೆ ಮೈತುಂಬಾ ಬಟ್ಟೆ ಧರಿಸಿ ಏಲಿಯನ್ ರೂಪದಲ್ಲಿ ಹೊರಗೆ ಬಂದಿದ್ದರು. ಆ ಕಾಸ್ಟ್ಯೂಮ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ

Urfi Javed 1 1

ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಕ್ವೀನ್ ಉರ್ಫಿ ಜಾವೇದ್  ಅಂದಾಕ್ಷಣ ಥಟ್ ಅಂತಾ ನೆನಪಾಗೋದೇ ಅವರು ಧರಿಸುವ ವಿಭಿನ್ನ ಬಟ್ಟೆಗಳು. ಹೀಗಿರುವಾಗ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿದಿರಿನ ಧಿರಿಸಿನಲ್ಲಿ ಉರ್ಫಿ ಎಂಟ್ರಿ ಕೊಟ್ಟಿದ್ದರು. ನಟಿಯ ಈ ಲುಕ್ ಟ್ರೋಲಿಗರ ಬಾಯಿಗೆ ಆಹಾರವಾಗಿತ್ತು. ಬಿದಿರಿನ ಉಡುಪಿನ ವೀಡಿಯೋವನ್ನ ಅನೇಕರು ಶೇರ್ ಮಾಡಿದ್ದರು.

urfi javed 4

ವಿಚಿತ್ರ ಫ್ಯಾಷನ್ ಐಕಾನ್ ಅಂತಲೇ ಫೇಮಸ್ ಆಗಿರುವ ಉರ್ಫಿ ಜಾವೇದ್ ಗೆ ಅನೇಕರು ಬೆದರಿಕೆ ಹಾಕಿದ್ದಾರೆ. ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ಉರ್ಫಿ ಕೂಡ ಸುಮ್ಮನೆ ಕುಳಿತಿಲ್ಲ. ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ತಮಗೆ ಭದ್ರತೆ ಬೇಕು ಎಂದು ಉರ್ಫಿ ಮನವಿ ಮಾಡಿಕೊಂಡಿದ್ದರು.

urfi javed 1

ಉರ್ಫಿ ಅವರಿಗೆ ಭದ್ರತೆ ಮತ್ತು ಅವರ ಬೇಡಿಕೆಯನ್ನು ಪರಿಶೀಲಿಸುವಂತೆ ಮುಂಬೈ (Mumbai)ಪೊಲೀಸ್ ಕಮಿಷನರ್ ಗೆ (Commissioner) ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿತ್ತು. ಮುಂಬೈ ಪೊಲೀಸ್ ಕಮಿಷ್ನರ್ ಗೆ ಬರೆದ ಪತ್ರದಲ್ಲಿ ಉರ್ಫಿ ಜಾವೇದ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಚಂಕಕರ್ (Rupali Chankakar) ತಿಳಿಸಿದ್ದರು.

Urfi Javed

ಉರ್ಫಿ ಜಾವೇದ್ ಅವರು ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದರು. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ರಕ್ಷಣೆ ನೀಡುವಂತೆ ಉರ್ಫಿ ಮನವಿ ಮಾಡಿದ್ದರು. ಅದಕ್ಕೂ ಮುನ್ನ ತಮ್ಮಿಂದ ಯಾವುದೇ ತಪ್ಪು ಆಗಿಲ್ಲ ಎಂದು ಮನದಟ್ಟು ಮಾಡಲು ವಿಚಾರಣೆಗೂ ಖುದ್ದಾಗಿ ಹೋಗಿದ್ದರು.

 

ನಟಿ ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಅಲ್ಲದೇ, ಅಸಹ್ಯ ಎನ್ನುವಂತಹ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಚಿತ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದರು.

Share This Article