ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಮುಂಬೈ ಪೊಲೀಸ್ ಠಾಣೆಗೆ ಹಾಜರಾಗಿ, ಎರಡು ಗಂಟೆಗಳ ಕಾಲ ಪೊಲೀಸ್ ವಿಚಾರಣೆ ಎದುರಿಸಿದ್ದಾರೆ. ಇವರು ಸಾರ್ವಜನಿಕವಾಗಿ ಅಶ್ಲೀಲತೆ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ವಾಘ್, ಎರಡು ದಿನಗಳ ಹಿಂದೆಯಷ್ಟೇ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಮುಂಬೈ ಪೊಲೀಸರು ಉರ್ಫಿ ಜಾವೇದ್ ಗೆ ಸಮನ್ಸ್ ನೀಡಿದ್ದರು.
ಮೊನ್ನೆಯಷ್ಟೇ ನಟಿ ಉರ್ಫಿ ಜಾವೇದ್ ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದಾರೆ. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ರಕ್ಷಣೆ ನೀಡುವಂತೆ ಉರ್ಫಿ ಮನವಿ ಮಾಡಿದ್ದಾರೆ. ಅದಕ್ಕೂ ಮುನ್ನ ತಮ್ಮಿಂದ ಯಾವುದೇ ತಪ್ಪು ಆಗಿಲ್ಲ ಎಂದು ಮನದಟ್ಟು ಮಾಡಲು ವಿಚಾರಣೆಗೂ ಖುದ್ದಾಗಿ ಹೋಗಿದ್ದಾರೆ. ಇದನ್ನೂ ಓದಿ: ಸಾನ್ಯ ಜೊತೆ ರೂಪೇಶ್ ಶೆಟ್ಟಿ ಮೀಟಿಂಗ್: ಮದುವೆ ಬಗ್ಗೆ ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ
ನಟಿ ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಅಲ್ಲದೇ, ಅಸಹ್ಯ ಎನ್ನುವಂತಹ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಚಿತ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದಾರೆ.
ತನ್ನ ವಿಚಿತ್ರ ಕಾಸ್ಟ್ಯೂಮ್ ಮೂಲಕ ಬಾಲಿವುಡ್ ಸಿನಿ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಉರ್ಫಿ ಜಾವೇದ್ ಮೇಲೆ ಉರಿದುಕೊಂಡವರೇ ಹೆಚ್ಚು. ಅವಳು ಧರಿಸುವ ಅರೆಬರೆ ಬಟ್ಟೆಯ ಬಗ್ಗೆ ಸಾಕಷ್ಟು ದೂರುಗಳು ಇವೆ. ಈ ವಿಚಾರವಾಗಿ ಅವಳು ಪೊಲೀಸ್ ಸ್ಟೇಶನ್ ಮೆಟ್ಟಿಲೂ ಹತ್ತಿದ್ದಾರೆ. ದುಬೈನಲ್ಲಿ ಪೊಲೀಸ್ ವಿಚಾರಣೆಗೂ ಒಳಗಾಗಿದ್ದಾರೆ. ಸದಾ ವಿವಾದವನ್ನೇ ಬೆನ್ನತ್ತಿ ಹೋಗುವ ಉರ್ಫಿ ಬಗ್ಗೆ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಹೆಮ್ಮೆಯಿಂದ ಮಾತನಾಡಿದ್ದಾರೆ. ಅವರನ್ನು ಮಾದರಿಯಾಗಿ ತಗೆದುಕೊಳ್ಳುವಂತೆ ಕರೆಕೊಟ್ಟಿದ್ದಾರೆ.
ಬಾಲಿವುಡ್ ಸಿಂಗರ್ ಯೋ ಯೋ ಹನಿ ಸಿಂಗ್, ಸದ್ಯ ತಮ್ಮ ಆಲ್ಬಂವೊಂದರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಉರ್ಫಿ ಜಾವೇದ್ ಬಗ್ಗೆ ಹಾಡಿಹೊಗಳಿದ್ದಾರೆ. ಉರ್ಫಿ ತನ್ನಿಷ್ಟದಂತೆ ಬದುಕುತ್ತಿರುವ ನಟಿ. ತುಂಬಾ ಧೈರ್ಯವಂತೆ. ಯಾರಿಗೂ ಹೆದರದೇ ತನ್ನ ಬದುಕನ್ನು ಕಟ್ಟಿಕೊಂಡಿದ್ದಾಳೆ. ಹಾಗಾಗಿ ದೇಶದ ಹುಡುಗಿಯರು ಅವಳನ್ನು ನೋಡಿ ಕಲಿತುಕೊಳ್ಳಬೇಕು’ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k