ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಟಿ, ಬಿಜೆಪಿ ವಕ್ತಾರೆ ಮಾಳವಿಕ ಅವಿನಾಶ್ ಆಗ್ರಹಿಸಿದ್ದಾರೆ.
ಒಂದು ವೀಡಿಯೋ ಟ್ವೀಟ್ ಮಾಡಿರುವ ನಟಿ, ಈ ವಿಡಿಯೋ ಜೆಎನ್‍ಯುದ್ದು ಅಲ್ಲ. ಇದರಲ್ಲಿರುವುದು ನಮ್ಮ ಮೈಸೂರು ಯೂನಿರ್ವಸಿಟಿಯ ವಿದ್ಯಾರ್ಥಿಗಳು. ಈ ಮೂಲಕ ಫ್ರೀ ಕಾಶ್ಮೀರದ ಕೂಗು ಕರ್ನಾಟಕದ ಮಣ್ಣಿಗೂ ಪಸರಿಸಿರುವುದನ್ನು ಕಾಣಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸಂಸದ ಪ್ರತಾಪ್ ಸಿಂಹ ಮೊದಲಾದವರಿಗೆ ಟ್ಯಾಗ್ ಮಾಡಿದ್ದಾರೆ.
Advertisement
This isn’t JNU, this is our very own Mysuru University!The “FreeKashmir” separatist poison that Left is spewing, has landed on Karnataka’s soil too…urge immediate action! @BSYBJP @BSBommai @mepratap @drashwathcn via @republic @PoojaPrasanna4 pic.twitter.com/kANS86YdSb
— Malavika Avinash (@MalavikaBJP) January 9, 2020
Advertisement
ಏನಿದು ಘಟನೆ?:
ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನಾ ಮೆರವಣಿಗೆ ವೇಳೆ ಫ್ರೀ ಕಾಶ್ಮೀರ್ ಪೋಸ್ಟರ್ ಗಳು ರಾರಾಜಿಸಿವೆ. ಪ್ರತಿಭಟನೆಯ ಮೂಲ ಉದ್ದೇಶ ಬಿಟ್ಟು ಫ್ರೀ ಕಾಶ್ಮೀರ್ ಬಗ್ಗೆ ವಿದ್ಯಾರ್ಥಿಗಳಿಂದ ಪೋಸ್ಟರ್ ಪ್ರದರ್ಶನದ ಹಿಂದೆ ಯಾರ ಕೈವಾಡವಿದೆ ಎಂಬ ಪ್ರಶ್ನೆ ಎದುರಾಗಿದೆ. ಈ ಮೂಲಕ ಮೈಸೂರು ವಿವಿಯ ವಿದ್ಯಾರ್ಥಿಗಳು ಜೆಎನ್‍ಯು ಮಾದರಿ ಅನುಸರಿಸುವುದಕ್ಕೆ ಮುಂದಾಗಿದ್ದಾರಾ ಎಂಬ ಪ್ರಶ್ನೆ ಕೂಡ ಮೂಡಿಸಿದೆ.
Advertisement
ಜೆಎನ್‍ಯು ವಿವಿಯ ವಿದ್ಯಾರ್ಥಿಗಳ ಮೇಲಿನ ಖಂಡಿಸಿ ಎಬಿವಿಪಿ ವಿರುದ್ಧ ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿಗಳ ಒಕ್ಕೂಟ, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ಬಹುಜನ ವಿದ್ಯಾರ್ಥಿ ಸಂಘದಿಂದ ಈ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಎಬಿವಿಪಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಮೈಸೂರು ವಿವಿ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಬಳಿಯಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆದಿತ್ತು.
Advertisement
ವಿವಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ. ಜೆಎನ್‍ಯು ವಿದ್ಯಾರ್ಥಿಗಳಲ್ಲದೇ ಉಪಾಧ್ಯಾಯರ ಮೇಲೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದರು. ಹೀಗಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು. ಈ ಕೂಗಿನ ನಡುವೆ ಫ್ರೀ ಕಾಶ್ಮೀರ ಪೋಸ್ಟರ್‍ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪ್ರದರ್ಶಿಸಿರೋದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.