ರಾಜ್ಯ ರಾಜಕೀಯದಲ್ಲಿ ವಿವಾದಿತ ಪಾತ್ರಗಳಾಗಿ ಚರ್ಚೆಯಲ್ಲಿರುವ ಉರಿಗೌಡ-ನಂಜೇಗೌಡ (Urigowda -Nanjegowda) ಅವರುಗಳನ್ನು ಆಧರಿಸಿದ ಸಿನಿಮಾ ಮಾಡಲು ನಿರ್ಮಾಪಕ, ಹಾಲಿ ಸಚಿವ ಮುನಿರತ್ನ (Munirathna) ಅವರು ಇದೀಗ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿದ್ದರು. ಮೇ 18ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಎಂದು ಅನೌನ್ಸ್ ಮಾಡಿದ್ದರು. ಈ ಬೆನ್ನಲ್ಲೇ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನ ಮುನಿರತ್ನ ಭೇಟಿಯಾಗಲಿದ್ದಾರೆ.
ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ.#UriGowda #NanjeGowda #Munirathna #VrushabhadriProductions pic.twitter.com/wS2SuW9vdI
— Munirathna (@MunirathnaMLA) March 18, 2023
Advertisement
ಚಿತ್ರಕ್ಕೆ `ಉರಿಗೌಡ-ನಂಜೇಗೌಡ (1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯನ್ನಿಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಮುನಿರತ್ನ ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ. ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ʻಉರಿಗೌಡ ನಂಜೇಗೌಡʼ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Advertisement
ಉರಿಗೌಡ-ನಂಜೇಗೌಡ ಕುರಿತ ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮಾ.20ರಂದು ಮುನಿರತ್ನ ಅವರು ಭೇಟಿಯಾಗುತ್ತಿದ್ದಾರೆ. ಸಿನಿಮಾದ ಬಗ್ಗೆ ಮಹತ್ವದ ಚರ್ಚೆ ಮಾಡಲಿದ್ದಾರೆ. ಶ್ರೀಗಳ ಸಲಹೆ ಪಡೆದು ಮುಂದುವರೆಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ವಿವಾದದ ನಡುವೆಯೂ `ಉರಿಗೌಡ – ನಂಜೇಗೌಡ’ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್!
Advertisement
ಇನ್ನೂ ಈಗಾಗಲೇ ಅಶೋಕ್ -ಅಶ್ವಥ್ ನಾರಾಯಣ ಅವರು ಉರಿಗೌಡ-ನಂಜೇಗೌಡರ ಇತಿಹಾಸ ಬಗ್ಗೆ ಮಾತಾಡಿದ್ದಾರೆ. ನಾನು ಒಬ್ಬ ನಿರ್ಮಾಪಕನಾಗಿ ಅವರ ಚಿತ್ರ ಮಾಡೋಣ ಎಂದು ನಿರ್ಧರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಶ್ರೀಗಳು ಚರ್ಚೆ ಮಾಡಲು ನನ್ನನ್ನು ಕರೆಸಿದ್ದಾರೆ. ನಾಳೆ (ಮಾ.20) ಬೆಳಿಗ್ಗೆ ಶ್ರೀಗಳ ಭೇಟಿ ಮಾಡ್ತಿದೀನಿ. ಇತಿಹಾಸದ ಬಗ್ಗೆ ಮಾತಾಡೋರು ಅದಕ್ಕೆ ಜಾತಿ ಬಣ್ಣ ಕೊಡಬಾರದು. ಸಿನಿಮಾ ಈಗ ಚರ್ಚೆಯಲ್ಲಿದೆ. ಶ್ರೀಗಳನ್ನು ಭೇಟಿ ಮಾಡೋವರೆಗೂ ಚಿತ್ರದ ಬಗ್ಗೆ ಹೆಚ್ಚಾಗೇನೂ ಮಾತಾಡಲ್ಲ ಎಂದು ನಿರ್ಮಾಪಕ ಮುನಿರತ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.