ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಮತ್ತೆ ಸುದ್ದಿಯಲ್ಲಿದ್ದಾರೆ. ಬೋಲ್ಡ್ ಆಗಿ ಹೆಜ್ಜೆ ಹಾಕುವ ಮೂಲಕ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ಬಾಲಿವುಡ್ ನಟ ಸನ್ನಿ ಡಿಯೋಲ್ ಸಿನಿಮಾದಲ್ಲಿ ನಟಿ ಸೊಂಟ ಬಳುಕಿಸಿದ್ದಾರೆ. ಇದನ್ನೂ ಓದಿ:ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಫ್ಯಾನ್ಸ್‌ಗೆ ಬಹಿರಂಗ ಪತ್ರ ಬರೆದ ನಟ
- Advertisement -
ನಾಯಕಿಯಾಗಿ ಸಿನಿಮಾಗಳಲ್ಲಿ ಬ್ಯುಸಿ ಇರುವಾಗಲೇ ಐಟಂ ಹಾಡಿಗೆ ಊರ್ವಶಿ ಡ್ಯಾನ್ಸ್ ಮಾಡಿದ್ದಾರೆ. ಸನ್ನಿ ಡಿಯೋಲ್ ನಟನೆಯ ‘ಜಟ್’ (Jaat) ಸಿನಿಮಾದಲ್ಲಿ ‘ಟಚ್ ಕಿಯಾ’ ಹಾಡಿಗೆ ಅವರು ಸೊಂಟ ಬಳುಕಿಸಿದ್ದಾರೆ. ನಟಿಯು ಮಾದಕವಾಗಿ ಡ್ಯಾನ್ಸ್ ಮಾಡಿರೋದನ್ನು ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸದ್ಯ ಈ ಸಾಂಗ್ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಇದನ್ನೂ ಓದಿ:ಬ್ರೇಕಪ್ ಬೆನ್ನಲ್ಲೇ ಸಂಬಂಧವನ್ನು ಐಸ್‌ಕ್ರೀಮ್‌ನಂತೆ ಆಸ್ವಾದಿಸಬೇಕು ಎಂದ ವಿಜಯ್ ವರ್ಮಾ
- Advertisement -
View this post on Instagram
- Advertisement -
‘ಜಟ್’ ಚಿತ್ರ ಜಬರ್‌ದಸ್ತ್ ಆಗಿರುವ ಆ್ಯಕ್ಷನ್ಸ್ ಒಳಗೊಂಡಿರುವ ಸಿನಿಮಾ ಆಗಿದೆ. ಸನ್ನಿ ಡಿಯೋಲ್ (Sunny Deol) ಜೊತೆ ರಣದೀಪ್ ಹೂಡಾ, ರೆಜಿನಾ, ಸೆಯಾಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರ ಏ.10ರಂದು ರಿಲೀಸ್ ಆಗಲಿದೆ.