ಬಹುಭಾಷಾ ನಟಿಯಾಗಿ ಮಿಂಚ್ತಿರುವ ಊರ್ವಶಿ ರೌಟೇಲಾ (Uravashi Rautela) ಮತ್ತೆ ರಿಷಬ್ ಪಂತ್ (Rishab Pant) ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆಷ್ಟೇ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಹಿಂದೆ ಊರ್ವಶಿ ಬಿದ್ದಿದ್ದಾರೆ. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ.
ಕನ್ನಡ, ತೆಲುಗು, ಹಿಂದಿ ಸಿನಿಮಾಗಳಲ್ಲಿ ಮಿಂಚ್ತಿರುವ ಊರ್ವಶಿ ಈಗ ಮತ್ತೆ ರಿಷಬ್ ಪಂತ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಮ್ಮ ಪಾಡಿಗೆ ರಿಷಬ್ ಇದ್ದರೂ ಕೂಡ ಅವರಿಗೆ ಬಿಟ್ಟು ಬಿಡದೇ ಕಾಡ್ತಿದ್ದಾರೆ ನಟಿ ಊರ್ವಶಿ ರೌಟೇಲಾ. ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಗಿದೆ. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

ಕ್ರಿಕೆಟಿಗ ರಿಷಬ್ ಪಂತ್ (Rishab Pant) ಅವರಿಗೆ ಮುಂಬೈನ `ಕೋಕಿಲಾಬೇನ್ ಧೀರುಬಾಯ್ ಅಂಬಾನಿ’ (Kokilaben Dhirubhai Ambani Hospital) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯ ಫೋಟೋವನ್ನ ನಟಿ ಊರ್ವಶಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ನಟಿಯ ಈ ನಡೆಗೆ ಟೀಕೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಊರ್ವಶಿ ಹೀಗೆಲ್ಲಾ ಮಾಡ್ತಿದ್ದಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k



