ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಅ.14ರಂದು ನಡೆದ ಭಾರತ- ಪಾಕಿಸ್ತಾನ ಕ್ರಿಕೆಟ್ ಪಂದ್ಯಾವಳಿ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ, ಐರಾವತ ನಟಿ ಊರ್ವಶಿ ರೌಟೇಲಾ ಕೂಡ ಬಂದಿದ್ದರು. ಪಂದ್ಯ ನೋಡುವಾಗ ಅವರು ಅತ್ಯಂತ ದುಬಾರಿ ಚಿನ್ನದ ಐಫೋನ್ ಕಳೆದುಕೊಂಡಿರೋದಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ.
View this post on Instagram
ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ ಎಂದು ಊರ್ವಶಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ:ಪತಿ ರಣ್‌ಬೀರ್, ರಶ್ಮಿಕಾ ಮಂದಣ್ಣ ಲಿಪ್‌ಲಾಕ್‌ಗೆ ಆಲಿಯಾ ಭಟ್ ಪ್ರತಿಕ್ರಿಯೆ
ನಟಿ ಊರ್ವಶಿ ಇದೀಗ ಶೇರ್ ಮಾಡಿರುವ ಪೋಸ್ಟ್ ಕೂಡ ಸಖತ್ ಟ್ರೋಲ್ ಆಗುತ್ತಿದೆ. ಸುದ್ದಿಯಾಗಲು ಸದಾ ಒಂದಲ್ಲಾ ಒಂದು ಗಿಮಿಕ್ ಮಾಡುತ್ತಿರುತ್ತಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರುತ್ತಿದ್ದಾರೆ. ಐಫೋನ್ ಕಳೆದುಕೊಂಡಿದ್ದಾರೆ ಎಂಬ ವಿಚಾರವೇ ಸುಳ್ಳು ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿಯ ಬಗ್ಗೆ ಪರ ವಿರೋಧದ ಚರ್ಚೆ ಕೂಡ ನಡೆಯುತ್ತಿದೆ.