ಬಾಲಿವುಡ್ ನಟಿ ಊರ್ವಶಿ ರೌಟೇಲಾ ವಜ್ರಖಚಿತ ಮೊಬೈಲ್ ಬಳಕೆ ಮಾಡುವ ಮೂಲಕ ಸಖತ್ ಸುದ್ದಿಯಾಗಿದ್ದರು. ಈ ಬಾರಿ ಚಿನ್ನದ ಒಳ ಉಡುಪು ಧರಿಸಿ ಪ್ರಚಾರ ಪಡೆಯುತ್ತಿದ್ದಾರೆ. ಆ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅದು ಚಿನ್ನದ ಉಡುಪು ಅಂತ ಹೇಳದೇ ಇದ್ದರೂ, ಫ್ಯಾನ್ಸ್ ಮಾತ್ರ ಚಿನ್ನದ್ದಾ ಎಂದು ಕೇಳಿದ್ದಾರೆ.
ಊರ್ವಶಿ ರೌಟೇಲಾ (Uravashi Rautela) ಮತ್ತು ರಿಷಬ್ ಪಂತ್ (Rishab Pant) ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೇ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ. ಅದು ಜಾಹೀರಾತು ಒಂದರ ಡೈಲಾಗ್. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ರಿಷಬ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದಿಲ್ಲ ಎಂದಿದ್ದಾರೆ.
ಜಾಹೀರಾತುವೊಂದರಲ್ಲಿ ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಊರ್ವಶಿಯನ್ನೂ ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.
ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.