ಕೀವ್: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವನ್ನು ತಡೆಯುವ ಉದ್ದೇಶದಿಂದ ಜರ್ಮನಿ ಮತ್ತು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು SWIFT ಜಾಗತಿಕ ಪಾವತಿ ವ್ಯವಸ್ಥೆಯಿಂದ ರಷ್ಯಾವನ್ನು ಕಡಿತಗೊಳಿಸಲು ಒಪ್ಪಿಕೊಂಡಿವೆ ಎಂದು ಜರ್ಮನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಕೆನಡಾ, ಇಟಲಿ, ಗ್ರೇಟ್ ಬ್ರಿಟನ್ ಮತ್ತು ಯುರೋಪಿಯನ್ ಕಮಿಷನ್‍ಗಳು ಈ ನಿರ್ಧಾರವನ್ನು ಒಪ್ಪಿಕೊಂಡಿದ್ದು, ರಷ್ಯಾದ ಕೇಂದ್ರ ಬ್ಯಾಂಕ್‍ಗಳ ಮೇಲೆ ನಿರ್ಬಂಧ ಹೇರಲಾಗುತ್ತದೆ. ಇದು ಶ್ರೀಮಂತ ರಷ್ಯನ್ನರು ಮತ್ತು ಅವರ ಕುಟುಂಬಗಳಿಗೆ ನೀಡಿರುವ ಗೋಲ್ಡನ್ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಉಕ್ರೇನ್ ವಿರುದ್ಧ ಯುದ್ಧವನ್ನು ಮಾಡುತ್ತಿರುವ ರಷ್ಯಾವನ್ನು ಬೆಂಬಲಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸುತ್ತದೆ. ಇದನ್ನೂ ಓದಿ: ಉಕ್ರೇನ್‌ಗೆ 4,503 ಕೋಟಿ ರೂ. ಭದ್ರತಾ ನೆರವು ಘೋಷಿಸಿದ ಅಮೆರಿಕ
Advertisement
Advertisement
ಉಕ್ರೇನ್ ಮತ್ತು ಯುರೋಪಿಯನ್ ಶಾಂತಿ ಸುವ್ಯವಸ್ಥೆಯ ಮೇಲೆ ರಷ್ಯಾ ತನ್ನ ದಾಳಿಯನ್ನು ಕೊನೆಗೊಳಿಸದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇತರೆ ದೇಶಗಳು ವಾರ್ನ್ ಮಾಡಿದೆ. ಇದನ್ನೂ ಓದಿ: ಉಕ್ರೇನ್‌ಗೆ ಸಹಕಾರ ನೀಡುತ್ತೇವೆ ಎಂದಿದ್ದ ಅಮೆರಿಕ ಸೇನೆಯನ್ನು ಕಳುಹಿಸಿಲ್ಲ ಯಾಕೆ?