ವಾಷಿಂಗ್ಟನ್: ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ (Donald Trump) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಕ್ರಮ ವಲಸಿಗರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಅದರಂತೆ ಬೃಹತ್ ಕಾರ್ಯಾಚರಣೆಯೊಂದರಲ್ಲಿ 500ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು (Illegal Immigrants) ಬಂಧಿಸಿದ್ದು, ನೂರಾರು ಮಂದಿಯನ್ನ ಗಡಿಪಾರು ಮಾಡಲಾಗಿದೆ.
🚨DAILY IMMIGRATION ENFORCEMENT REPORTING FROM ICE🚨
538 Total Arrests
373 Detainers Lodged
Examples of the criminals arrested below 🔽🔽🔽
— The White House (@WhiteHouse) January 24, 2025
Advertisement
ಈ ಕುರಿತು ಶ್ವೇತಭವನದ (White House) ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೀವಿಟ್ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯುಎಸ್‌ನ ಅಧಿಕಾರಿಗಳು ಸುಮಾರು 538 ಅಕ್ರಮ ವಲಸಿಗರನ್ನು ಬಂಧಿಸಿದ್ದು, ಮಿಲಿಟರಿ ವಿಮಾನಗಳನ್ನು ಬಳಸಿಕೊಂಡು ನೂರಾರು ಮಂದಿಯನ್ನ ಗಡಿಪಾರು (Deported) ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್ ಬೆದರಿಕೆ
Advertisement
Advertisement
ಶಂಕಿತ ಭಯೋತ್ಪಾದಕರು, ಟ್ರೆನ್ ಡಿ ಅರಗುವಾ ಗ್ಯಾಂಗ್‌ನ ನಾಲ್ವರು ಸದಸ್ಯರು ಹಾಗೂ ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ಕೃತ್ಯ ಎಸಗಿ ಶಿಕ್ಷೆಗೊಳಾದವರು ಸೇರಿದಂತೆ 538 ಮಂದಿಯನ್ನು ಬಂಧಿಸಲಾಗಿದೆ. ಬಳಿಕ ಮಿಲಿಟರಿ ವಿಮಾನದ ಮೂಲಕ ನೂರಾರು ಮಂದಿಯನ್ನ ಗಡಿಪಾರು ಮಾಡಲಾಗಿದೆ. ಇದು ಅಮೆರಿಕದ ಇತಿಹಾಸದಲ್ಲೇ ಅತಿದೊಡ್ಡ ಗರಿಪಾರು ಕಾರ್ಯಾಚರಣೆ ಆಗಿದೆ. ಈ ಮೂಲಕ ಅಮೆರಿಕದ ನೂತನ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಬೀಗಿದ್ದಾರೆ.
Advertisement
ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟ್ರಂಪ್ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದರು. ಈ ಪೈಕಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಆದೇಶವು ಪ್ರಮುಖವಾಗಿತ್ತು. ಇದರ ಭಾಗವಾಗಿ ಇಂದು ಮೊದಲ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್ ಹೆರಿಗೆ ಬೇಡಿಕೆ
ಒಂದು ದಿನದ ಹಿಂದೆಯಷ್ಟೇ ಭಾರತದ ವಿದೇಶಾಂಗ ಸಚಿವ ಎಸ್.ಜೈಂಕರ್, ವಿದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಕ್ಯಾಪಿಟಲ್ ಭವನದ ಮೇಲೆ ದಾಳಿ ಮಾಡಿದ್ದ 1,600 ಮಂದಿಗೆ ಕ್ಷಮಾದಾನ – ಟ್ರಂಪ್ ನಿರ್ಧಾರಕ್ಕೆ ಖಂಡನೆ