ವಾಷಿಂಗ್ಟನ್: ಭಾರತದ ಪ್ರಮುಖ ಉದ್ಯಮಿ, ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ (Gautham Adani) ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಅಮೆರಿಕದಿಂದ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ಮೇಲಿದ್ದ ಎಲ್ಲಾ ಕ್ರಿಮಿನಲ್ ವಂಚನೆ ಮತ್ತು ಲಂಚದ ಆರೋಪಗಳನ್ನು ಅಮೆರಿಕದ ನ್ಯಾಯಾಂಗ ಇಲಾಖೆ ಶಾಶ್ವತವಾಗಿ ಕೈಬಿಟ್ಟಿದೆ.
ಗೌತಮ್ ಅದಾನಿ ಮತ್ತು ಸಾಗರ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ಹೈಪ್ರೊಫೈಲ್ ಸೆಕ್ಯೂರಿಟೀಸ್ ಮತ್ತು ವೈರ್ ವಂಚನೆ ಆರೋಪಗಳು ಕೇಳಿ ಬಂದಿದ್ದವು. ಈ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಟರ್‌ಗಳಿಗೆ ಸಾಧ್ಯವಾಗದ ಹಿನ್ನೆಲೆ ಪ್ರಕರಣವನ್ನು ಕೈಬಿಡಲಾಗಿದೆ ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ತಿಳಿಸಿದೆ. ಇನ್ನು, ಅದಾನಿ ಗ್ರೂಪ್‌ನ ಷೇರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಸಕಾರಾತ್ಮಕ ಚಲನೆಯನ್ನು ಕಾಣುತ್ತಿವೆ. ಇದನ್ನೂ ಓದಿ: ಮತ್ತೆ ಮೋದಿ, ಪುಟಿನ್ ಭೇಟಿ – ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಆಗಮನ
ಈ ಪ್ರಕರಣ ಇತ್ಯರ್ಥವಾದರೆ ಅಮೆರಿಕದ ಆರ್ಥಿಕತೆಯಲ್ಲಿ 10 ಬಿಲಿಯನ್ ಡಾಲರ್ (ಸುಮಾರು 83,000 ಕೋಟಿ ರೂ.) ಹೂಡಿಕೆ ಮಾಡುವುದಾಗಿ ಮತ್ತು ಅಲ್ಲಿ 15,000 ಹೊಸ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಅದಾನಿ ಸಮೂಹ ಭರವಸೆ ನೀಡಿದೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರ ದುರ್ಮರಣ

