ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಪತ್ನಿ ಜಿಲ್ ಬೈಡನ್ (72) (Jill Biden) ಅವರಿಗೆ ಕೊರೊನಾ (Covid-19) ಸೋಂಕು ದೃಢಪಟ್ಟಿದೆ. ಅವರಿಗೆ ಸಾಮಾನ್ಯ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಜಿಲ್ ಬೈಡನ್ ಅವರು ಡೆಲವೇರ್‌ನ ರೆಹೋಬೋತ್ ಬೀಚ್‍ನಲ್ಲಿರುವ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಅವರಿಗೆ ಕಳೆದ ವರ್ಷ ಆಗಸ್ಟ್‌ನಲ್ಲೂ ಕೋವಿಡ್ ಸೋಂಕು ಪತ್ತೆಯಾಗಿತ್ತು. ಇದನ್ನೂ ಓದಿ: ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ
- Advertisement
ಜಿಲ್ ಬೈಡನ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಅಧ್ಯಕ್ಷ ಬೈಡನ್ ಅವರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ. ಪರೀಕ್ಷೆಯಲ್ಲಿ ಅಧ್ಯಕ್ಷರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. ಅಧ್ಯಕ್ಷರನ್ನು ಈ ವಾರ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಈ ವೇಳೆ ರೋಗಲಕ್ಷಣಗಳ ಮೇಲ್ವಿಚಾರಣೆ ಮಾಡಲಾಗುತ್ತದೆ.
- Advertisement
ಸದ್ಯ ಅವರು ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ (G20 Summit) ಭಾಗಿಯಾಗಲಿದ್ದಾರೆ. ಅದಕ್ಕಾಗಿ ಸೆ.7 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆ.8 ರಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, 9 ಹಾಗೂ 10 ರಂದು ನಡೆಯಲಿರುವ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್ ಅವರಿಗೆ 2022ರ ಜುಲೈನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಇದನ್ನೂ ಓದಿ: ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ
Web Stories