– ರಿಪಬ್ಲಿಕನ್, ಡೆಮಾಕ್ರೆಟಿಕ್ ನಡುವಿನ ಹಗ್ಗಜಗ್ಗಾಟ ತಾರಕಕ್ಕೆ
– ದೇಶದ ಸುರಕ್ಷತೆ ಸೇರಿ ಕೆಲ ಅಗತ್ಯ ಸೇವೆಗಳಿಗೆ ಸಮಸ್ಯೆಯಿಲ್ಲ
ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಂತ ಹೇಳಿಕೊಳ್ಳುವ ಅಮೆರಿಕ (USA) ಇದೀಗ ಹಿಂದೆಂದೂ ಕಾಣದ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದೆ.
ಆಡಳಿತಾರೂಢ ಡೊನಾಲ್ಡ್ ಟ್ರಂಪ್ (Donald Trump) ರಿಪಬ್ಲಿಕನ್ ಪಕ್ಷ (Republican Party) ಮತ್ತು ವಿರೋಧ ಪಕ್ಷವಾದ ಡೆಮಾಕ್ರೆಟಿಕ್ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದೆ. ಆರೋಗ್ಯ ಸೇವಾ ಅನುದಾನದ ಭಿನ್ನಾಭಿಪ್ರಾಯದಿಂದ ಮಧ್ಯಂತರ ಅನುದಾನದ ಮಸೂದೆಗೆ ಬಹುಮತ ಸಿಗದೇ ಬಿಲ್ ಪಾಸ್ ಆಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಶಟ್‌ಡೌನ್ ಆಗಿದ್ದು 7.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ಭವಿಷ್ಯ ಅತಂತ್ರವಾಗಿದೆ.
ರಿಪಬ್ಲಿಕನ್ ಪಕ್ಷವು ಮಂಡಿಸಿದ ಮಧ್ಯಂತರ ಅನುದಾನ ಮಸೂದೆಯನ್ನು ಡೆಮಾಕ್ರೆಟಿಕ್ (Democartic) ಸದಸ್ಯರು ಸೆನೆಟ್‌ನಲ್ಲಿ ವಿರೋಧಿಸಿದರು. ತಮ್ಮ ಪ್ರಮುಖ ಬೇಡಿಕೆಗಳನ್ನು ಈ ಮಸೂದೆಯಲ್ಲಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಾಗ್ರಾಮ್ ವಾಯುನೆಲೆ | ಅಮೆರಿಕ ವಿರುದ್ಧ ಯುದ್ಧಕ್ಕೂ ಸೈ ಎಂದ ತಾಲಿಬಾನ್ – ಏನಿದು ವಿವಾದ?
ಅಫೋರ್ಡಬಲ್ ಕೇರ್ ಆಕ್ಟ್ ಅಂದರೆ ಒಬಾಮಾಕೇರ್ ಅಡಿಯಲ್ಲಿ ಲಕ್ಷಾಂತರ ಜನರಿಗೆ ನೀಡಲಾಗುತ್ತಿರುವ ಹೆಲ್ತ್ ಇನ್ಸೂರೆನ್ಸ್ ಸಬ್ಸಿಡಿಗಳನ್ನು ಮುಂದುವರಿಸಬೇಕು ಎನ್ನುವುದು ಡೆಮಾಕ್ರೆಟಿಕ್‌ಗಳ ಪ್ರಮುಖ ಬೇಡಿಕೆಯಾಗಿದೆ. ಇದಕ್ಕೆ ರಿಪಬ್ಲಿಕನ್ನರು ಒಪ್ಪದ ಕಾರಣ ಸೆನೆಟ್‌ನಲ್ಲಿ 55-45 ಮತಗಳ ಅಂತರದಿಂದ ಬಿಲ್ ಬಿದ್ದು ಹೋಯಿತು. ಇದರ ಪರಿಣಾಮವಾಗಿ ಆಡಳಿತ ಕಾರ್ಯನಿರ್ವಹಣೆಗೆ ಸರ್ಕಾರದ ಬಳಿ ಹಣವಿಲ್ಲದೇ ಬುಧವಾರ ಮಧ್ಯರಾತ್ರಿ 12:01ಕ್ಕೆ ಅಧಿಕೃತವಾಗಿ ಶಟ್‌ಡೌನ್ (US Shutdown) ಘೋಷಿಸಲಾಗಿದೆ.
🇺🇸 The US government shut down after midnight Wednesday as President Donald #Trump and lawmakers failed to break a budget deadlock over health care funding.
🛑 It’s the first shutdown in nearly 7 years, sidelining thousands of federal workers pic.twitter.com/im7YQ0Yt8u
— FRANCE 24 English (@France24_en) October 1, 2025
ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮೆರಿಕ ಇಂತಹ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿಂದೆ ಈ ಹಿಂದೆ 2018ರಲ್ಲಿ ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿಯಲ್ಲಿಯೇ 35 ದಿನಗಳ ಕಾಲ ಕೊನೆಯ ಬಾರಿ ಶಟ್‌ಡೌನ್ ಸಂಭವಿಸಿತ್ತು. ಈಗ ಎಷ್ಟು ದಿನ ಈ ಶಟ್‌ಡೌನ್ ಇರಲಿದೆಯೋ ಎಂಬುದು ಯಾರಿಗೂ ಗೊತ್ತಿಲ್ಲ.
ಅಮೆರಿಕ ಶಟ್‌ಡೌನ್ ಏನೆಲ್ಲಾ ಎಫೆಕ್ಟ್?
ದೇಶದ ಸುರಕ್ಷತೆ ಸೇರಿ ಕೆಲ ಅಗತ್ಯ ಸೇವೆಗಳು ಮುಂದುವರಿಯಲಿದ್ದು ಕಾನೂನಿನ ಪ್ರಕಾರ, ಅಗತ್ಯ ಸೇವೆಗಳ ನೌಕರರು ಕೆಲಸ ಮಾಡಲೇಬೇಕು. ಆದರೆ ಅವರಿಗೆ ಶಟ್‌ಡೌನ್ ಮುಗಿಯುವವರೆಗೂ ವೇತನ ಸಿಗುವುದಿಲ್ಲ. ಸೇನಾ ಸಿಬ್ಬಂದಿ, ಗಡಿ ಭದ್ರತಾ ಪಡೆ, ಮತ್ತು ಕಾನೂನು ಜಾರಿ ಸಂಸ್ಥೆಗಳು ಕರ್ತವ್ಯದಲ್ಲಿರುತ್ತವೆ.
US President Trump warned congressional Democrats that letting the federal government to shut down at midnight would allow his administration to take ‘irreversible’ actions including shutting down programs important to them https://t.co/UKhyPnJRRV pic.twitter.com/6g2xtMGNRp
— Reuters (@Reuters) September 30, 2025
ಆಸ್ಪತ್ರೆಗಳಲ್ಲಿನ ವೈದ್ಯಕೀಯ ಆರೈಕೆ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಮುಂದುವರಿಯುತ್ತದೆ. ಸಾಮಾಜಿಕ ಭದ್ರತೆ ಮತ್ತು ಮೆಡಿಕೇರ್ ಚೆಕ್‌ಗಳನ್ನು ಫಲಾನುಭವಿಗಳಿಗೆ ಕಳುಹಿಸಲಾಗುತ್ತದೆ. ನಾಸಾದ ಬಾಹ್ಯಾಕಾಶ ಯೋಜನೆಗಳು ಮತ್ತು ಅಧ್ಯಕ್ಷ ಟ್ರಂಪ್‌ರ ವಲಸೆ ನೀತಿಗೆ ಸಂಬಂಧಿಸಿದ ಕಾರ್ಯಗಳು ಮುಂದುವರಿಯಲಿವೆ. ಇದನ್ನೂ ಓದಿ: ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್
ಅಗತ್ಯವಲ್ಲದ ಎಂದು ಪರಿಗಣಿಸಲಾದ ಸುಮಾರು 7.50 ಲಕ್ಷ ನೌಕರರನ್ನು ವೇತನರಹಿತ ಕಡ್ಡಾಯ ರಜೆ ಮೇಲೆ ಕಳಿಸಲಾಗುತ್ತದೆ. ಶಿಕ್ಷಣ ಇಲಾಖೆಯ ಶೇ. 90ರಷ್ಟು ಸಿಬ್ಬಂದಿ ರಜೆಯಲ್ಲಿರುತ್ತಾರೆ. ರಾಷ್ಟ್ರೀಯ ಉದ್ಯಾನವನಗಳು, ವಸ್ತುಸಂಗ್ರಹಾಲಯಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ.
ಸಣ್ಣ ಉದ್ಯಮಗಳಿಗೆ ನೀಡುವ ಸಾಲ ಸ್ಥಗಿತಗೊಳ್ಳಲಿದೆ. ಆಹಾರ ನೆರವು ಕಾರ್ಯಕ್ರಮಗಳು, ವಿದ್ಯಾರ್ಥಿ ವೇತನ ವಿತರಣೆ, ಮತ್ತು ಆಹಾರ ತಪಾಸಣಾ ಕಾರ್ಯಗಳಿಗೆ ಅಡ್ಡಿಯಾಗಲಿದೆ. ದೇಶದ ಆರ್ಥಿಕತೆಯ ಪ್ರಮುಖ ಸೂಚಕವಾದ ಕಾರ್ಮಿಕ ಇಲಾಖೆಯ ಮಾಸಿಕ ನಿರುದ್ಯೋಗ ವರದಿ ಕೂಡ ಪ್ರಕಟವಾಗುವುದಿಲ್ಲ.