ವಾಷಿಂಗ್ಟನ್: ಕ್ಯಾಪಿಟಲ್ ಹಿಲ್ ಬಳಿಯ ಈಶಾನ್ಯ ವಾಷಿಂಗ್ಟನ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಹಲವು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎಫ್ ಸ್ಟ್ರೀಟ್ ನಾರ್ತ್ ಈಸ್ಟ್‌ನ 1500 ಬ್ಲಾಕ್‌ನಲ್ಲಿ ರಾತ್ರಿ 8:30 ರ ಸುಮಾರಿಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಸಂಬಂಧ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಟ್ವೀಟ್ ಮಾಡಿದ್ದು, ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಆದರೆ ಎಷ್ಟು ಮಂದಿ ಎಂಬ ಬಗ್ಗೆ ನಿಖರ ಮಾಹಿತಿ ನೀಡಿಲ್ಲ. ಇದನ್ನೂ ಓದಿ: ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ – ಪೊಲೀಸಪ್ಪನ ಮೂಗು, ಕಿವಿ, ತುಟಿ ಕಟ್
Advertisement
Advertisement
ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿರುವುದು ಕಂಡುಬಂದಿದೆ. ಅಂಬುಲೆನ್ಸ್‌ಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದಾಗ ಈ ಘಟನೆ ನಡೆದಿದೆ. ಕನಿಷ್ಠ 15 ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Advertisement
ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಹಿಂಸಾಚಾರದಲ್ಲಿ ಮಕ್ಕಳು ಹಾಗೂ ಜನರನ್ನು ರಕ್ಷಿಸುವ ಸಲುವಾಗಿ ಶಸ್ತ್ರಾಸ್ತ್ರಗಳಿಂದ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಬೇಕು. ಶಸ್ತ್ರಾಸ್ತ್ರ ಖರೀದಿ ವಯೋಮಿತಿಯನ್ನು 18ರಿಂದ 21ಕ್ಕೆ ಹೆಚ್ಚಿಸಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್
Advertisement
ಮೇ 24 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ 19 ಮಕ್ಕಳು ಸೇರಿದಂತೆ ಅನೇಕರು ಮೃತಪಟ್ಟಿದ್ದರು. ಜೂ.1ರಂದು ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದರು. ಜೂ.20ರಂದು ಅಪ್ರಾಪ್ತ ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರು ಸಾವನ್ನಪ್ಪಿದ್ದರು.