ವಾಷಿಂಗ್ಟನ್: ಭಾರತದ ಚುನಾವಣೆಗೆ (India Election) ವಿದೇಶದಿಂದ ಪಿತೂರಿ ನಡೆದಿದೆ ಎಂದು ಬಿಜೆಪಿ (BJP) ಆರೋಪಿಸುತ್ತಿರುವ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ (Donald Trump) ಬೈಡನ್ (Joe Biden) ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಮಿಯಾಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಮತದಾರರ ಮತದಾನದ ಪ್ರಮಾಣಕ್ಕಾಗಿ ನಾವು 21 ಮಿಲಿಯನ್ ಡಾಲರ್(180 ಕೋಟಿ ರೂ.) ಖರ್ಚು ಮಾಡಬೇಕೇ? ಅವರು ಬೇರೆಯವರನ್ನು ಆಯ್ಕೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ನಾನು ಭಾವಿಸುತ್ತೇನೆ. ಈ ವಿಚಾರವನ್ನು ನಾವು ಭಾರತ ಸರ್ಕಾರಕ್ಕೆ ಹೇಳಬೇಕಾಗಿದೆ ಎಂದು ತಿಳಿಸಿದ್ದಾರೆ.
Advertisement
#WATCH | Miami, Florida | Addressing the FII PRIORITY Summit, US President Donald Trump says, “… Why do we need to spend $21 million on voter turnout in India? I guess they were trying to get somebody else elected. We have got to tell the Indian Government… This is a total… pic.twitter.com/oxmk6268oW
— ANI (@ANI) February 20, 2025
Advertisement
ಟ್ರಂಪ್ ಸರ್ಕಾರ ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಿಗೆ ಅಮೆರಿಕ ನೀಡುತ್ತಿದ್ದ USAID ಅನುದಾನವನ್ನು ಸ್ಥಗಿತಗೊಳಿಸಿದೆ. ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಉಸ್ತುವಾರಿ ಎಲಾನ್ ಮಸ್ಕ್ (Elon Musk) ಅವರು ವೆಚ್ಚ ನಿಯಂತ್ರಣದ ಭಾಗವಾಗಿ ಕೈಗೊಂಡ ಈ ಕ್ರಮವನ್ನು ಟ್ರಂಪ್ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಏಪ್ರಿಲ್ ಒಳಗೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಟೆಸ್ಲಾ ಪ್ಲ್ಯಾನ್ – ಆರಂಭಿಕ ಬೆಲೆ ಎಷ್ಟು?
Advertisement
ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ ಬಳಿ ಹೆಚ್ಚು ಹಣವಿದೆ. ವಿಶ್ವದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತ ಒಂದು. ಅವರ ಸುಂಕಗಳು ತುಂಬಾ ಹೆಚ್ಚಿರುವುದರಿಂದ ನಮ್ಮ ವಸ್ತುಗಳು ಅಲ್ಲಿಗೆ ಹೋಗುವುದು ಕಷ್ಟ ಎಂದು ಹೇಳಿದ್ದಾರೆ. ಭಾರತದ ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ಅವರಿಗೆ ದುಡ್ಡು ನೀಡಬೇಕು. ನನಗೆ ಭಾರತ ಮತ್ತು ಪ್ರಧಾನ ಮಂತ್ರಿಯ ಬಗ್ಗೆ ತುಂಬಾ ಗೌರವವಿದೆ. ಆದರೆ ಮತದಾರರ ಮತದಾನಕ್ಕಾಗಿ (Voter Turnout) 21 ಮಿಲಿಯನ್ ಡಾಲರ್ ಯಾಕೆ ನೀಡಬೇಕು ಎಂದು ಕೇಳಿದ್ದಾರೆ.
Advertisement
ಭಾರತದಲ್ಲಿ ಮತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ಅಮೆರಿಕ ನೀಡುತ್ತಿದ್ದ 182 ಕೋಟಿ ಅನುದಾನವನ್ನು ಟ್ರಂಪ್ ಸರ್ಕಾರ ಕಳೆದ ವಾರ ಕಡಿತಗೊಳಿಸಿತ್ತು.