ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆ.24 ಮತ್ತು 25ರಂದು ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಇದೇ 24 ಮತ್ತು 25ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಟ್ರಂಪ್ ಭಾರತಕ್ಕೆ ತೆರಳುತ್ತಾರೆ ಎಂದು ಎಂದು ವೈಟ್‍ಹೌಸ್ ಮಂಗಳವಾರ ಅಧಿಕೃತವಾಗಿ ಟ್ವಿಟ್ಟರ್ ನಲ್ಲಿ ತಿಳಿಸಿದೆ. ಅಮೆರಿಕ ಮತ್ತು ಭಾರತದ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಟ್ರಂಪ್ ಭೇಟಿ ಸಹಕಾರಿಯಾಗಲಿದೆ ಎಂದು ವೈಟ್‍ಹೌಸ್ ಹೇಳಿದೆ.
Advertisement
ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಪ್ರವಾಸದಲ್ಲಿ ಟ್ರಂಪ್ ಮತ್ತು ಅವರ ಪತ್ನಿ ದೆಹಲಿ ಮತ್ತು ಅಹಮದಾಬಾದ್‍ಗೆ ಭೇಟಿ ನೀಡಲಿದ್ದಾರೆ. ಈ ಹಿಂದೆ ಬರಾಕ್ ಒಬಾಮ ಅವರು 2010 ಮತ್ತು 2015ರಲ್ಲಿ ಎರಡು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು.
Advertisement
Advertisement
ಅಮೆರಿಕದ ಹ್ಯೂಸ್ಟನ್ ನಲ್ಲಿ ಸೆಪ್ಟೆಂಬರ್ ನಲ್ಲಿ ನಡೆದ ‘ಹೌಡಿ ಮೋಡಿ’ ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಿದ್ದರು. ಈ ವೇಳೆ ಪ್ರಧಾನಿ ಮೋದಿ ಮತ್ತು ಟ್ರಂಪ್ ಕೈ ಜೋಡಿಸಿ ನಡೆದಿದ್ದರು.
Advertisement
ಈ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಟ್ರಂಪ್ ಅವರನ್ನು ಆಹ್ವಾನಿಸಲು ಸಿದ್ಧತೆ ನಡೆದಿತ್ತು. ಆದರೆ ಈಗ ಗಣರಾಜ್ಯೋತ್ಸವ ಮುಗಿದ ಬಳಿಕ ಟ್ರಂಪ್ ದಂಪತಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
President @realDonaldTrump & @FLOTUS will travel to India from February 24-25 to visit Prime Minister @narendramodi!
The trip will further strengthen the U.S.-India strategic partnership & highlight the strong & enduring bonds between the American & Indian people. ???????? ????????
— The White House 45 Archived (@WhiteHouse45) February 10, 2020