ಮಂಗಳೂರು: ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವ್ಯಾವಹಾರಿಕ ಪಾಲುದಾರ ಶಶಿಭೂಷಣ್ ಅವರು ಮಂಗಳೂರಿಗೆ ಭೇಟಿ ನೀಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ (Kukke Shri Subrahmanya Temple) ದರ್ಶನ ಪಡೆದರು.
Advertisement
ಚಂಪಾಷಷ್ಠಿ ದಿನ ಶಶಿಭೂಷಣ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಮೆರಿಕಾದಲ್ಲಿ ನೆಲೆಸಿರುವ ಇವರು ಹೈದರಾಬಾದ್‌ನ ಮೂಲದವರು. ಶಶಿಭೂಷಣ್ ಅಮೆರಿಕದಲ್ಲಿ 500 ಎಕರೆ ಜಾಗದಲ್ಲಿ 3,000 ಕೋಟಿ ವೆಚ್ಚದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ಮತ್ತು ದೇವಸ್ಥಾನ ಕಟ್ಟಿಸುತ್ತಿದ್ದಾರೆ.
Advertisement
Advertisement
ಅಮೆರಿಕನ್ ಪೊಲಿಟಿಕಲ್ ಆಕ್ಷನ್ ಕಮಿಟಿಯ ‘ಎ’ ಪ್ಯಾಕ್ ಮುನ್ನಡೆಸಿದ್ದರು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವಿನಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಈಗ ಅತ್ಯಂತ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.