ವಾಷಿಂಗ್ಟನ್: ರಷ್ಯಾ- ಉಕ್ರೇನ್ (Ukraine) ಯುದ್ಧದ ಬಗ್ಗೆ ಎಲ್ಲಾ ರೀತಿಯ ಹಿಂಸಾಚಾರಗಳನ್ನು ನಿಲ್ಲಿಸಲು ಮತ್ತು ರಾಜತಾಂತ್ರಿಕ ಮಾರ್ಗವನ್ನು ಅನುಸರಿಸಲು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಿಲುವನ್ನು ಅಮೆರಿಕ (America) ಮತ್ತೊಮ್ಮೆ ಸ್ವಾಗತಿಸಿದೆ.
ಪ್ರಧಾನಿ ಮೋದಿ ಅವರು ರಷ್ಯಾವು (Russia) ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು ತಗ್ಗಿಸಲು ಮಿತ್ರರಾಷ್ಟ್ರಗಳೊಂದಿಗೆ ಸಮನ್ವಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.
ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವಲ್ಲಿ ಭಾರತದ ಪಾತ್ರದ ಬಗ್ಗೆ ಪ್ರತಿಕ್ರಿಯಿಸಿ, ಶಾಂತಿಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹೊಂದಿರುವ ಮತ್ತು ಈ ಯುದ್ಧವನ್ನು ಕೊನೆಗೊಳಿಸಲು ಆಸಕ್ತಿ ಹೊಂದಿರುವ ಯಾವುದೇ ದೇಶವಾದರೂ ಉಕ್ರೇನ್‍ನೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ಎಂದರು.
ಇಂದಿನ ಯುಗ ಯುದ್ಧವಲ್ಲ. ಬದಲಿಗೆ ಆಹಾರ, ಇಂಧನ, ಭದ್ರತೆ ಹಾಗೂ ರಸಗೊಬ್ಬರಗಳ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಸೆಪ್ಟೆಂಬರ್‌ನಲ್ಲಿ ಸಮರ್‌ಕಂಡ್‍ನಲ್ಲಿ ನಡೆದ ಎಸ್‍ಸಿಒ ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‍ಗೆ ಮೋದಿ ತಿಳಿಸಿದ್ದರು. ಈ ವೇಳೆ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು, ಮಾತುಕತೆ ಮತ್ತು ರಾಜತಾಂತ್ರಿಕತೆಯ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಇದು ನೆಹರೂ ಭಾರತವಲ್ಲ.. ಮೋದಿ ಭಾರತ – ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ಪ್ರಧಾನಿ ಮೋದಿ ಶುಕ್ರವಾರ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಗಂಟೆಗಳ ನಂತರ ವಿದೇಶಾಂಗ ಇಲಾಖೆಯು ಈ ಹೇಳಿಕೆ ನೀಡಿದೆ. ಈ ವೇಳೆ ಭಾರತವು ಮುಂದಿನ ಜಿ20 ಅಧ್ಯಕ್ಷತೆಯನ್ನು ವಹಿಸಿರುವ ಬಗ್ಗೆ ಪುಟಿನ್‍ಗೆ ಮೋದಿ ವಿವರಿಸಿದ್ದಾರೆ. ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು