ವಾಷಿಂಗ್ಟನ್: 2008ರ ಮುಂಬೈ ತಾಜ್ ಹೋಟೆಲ್‌ನಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಕಾನೂನು ಹೋರಾಟಕ್ಕೆ ಜಯ ಸಿಕ್ಕಿದೆ. ಪ್ರಕರಣದ ಪ್ರಮುಖ ಅಪರಾಧಿ ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಕೋರಲಾಗಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಇದನ್ನೂಓದಿ: ಇನ್ಸ್ಟಾದಲ್ಲಿ ಯುವತಿಗೆ ಲೈಕ್, ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಯಿಂದ ತರಾಟೆ – ಯುವಕ ಆತ್ಮಹತ್ಯೆ
ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹಾವೂರ್ ರಾಣಾಗೆ ಸೋಲು ಉಂಟಾಗಿತ್ತು. ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ಸರ್ಟಿಯೊರಾರಿ ರಿಟ್ ಅರ್ಜಿ ಸಲ್ಲಿಸಿದ್ದನು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಜನವರಿ 21 ರಂದು ಸುಪ್ರೀಂ ಕೋರ್ಟ್ ಇದನ್ನು ನಿರಾಕರಿಸಿತು. ಇದನ್ನೂಓದಿ: ಹೀರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್ ಕತ್ತಿ ರಾಜೀನಾಮೆ
ರಾಣಾ ಪ್ರಸ್ತುತ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ನಲ್ಲಿ ಬಂಧಿತನಾಗಿದ್ದಾನೆ. ಕಳೆದ ತಿಂಗಳು ಕ್ಯಾಲಿಫೋರ್ನಿಯಾದ ಜಿಲ್ಲಾ ಕೇಂದ್ರ ಕೋರ್ಟ್ 26/11 ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಇದನ್ನೂಓದಿ: ನಕಲಿ ಫೈನಾನ್ಸ್ ರಿಕವರಿ ಟೀಂನಿಂದ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ
ತಹಾವೂರ್ ರಾಣಾ ಯಾರು?
ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದಾನೆ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭಾಗವಹಿಸಿದ್ದಾನೆ ಎಂದು ಭಾರತ ಆರೋಪಿಸಿದೆ. ಇದನ್ನೂಓದಿ: ಪಂಜಾಬಿನಲ್ಲಿ ಕಬಡ್ಡಿ ಟೂರ್ನಿ | ತಮಿಳುನಾಡು ಆಟಗಾರ್ತಿಯರ ಮೇಲೆ ಹಲ್ಲೆ – ವಿಡಿಯೋ ವೈರಲ್
ಮುಂಬೈ ದಾಳಿ:
2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಇದನ್ನೂಓದಿ: WHO | ಅತಿ ದೊಡ್ಡ ದಾನಿಯೇ ಹೊರಕ್ಕೆ – ಭಾರತದ ಮೇಲೂ ಎಫೆಕ್ಟ್?
ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಇದನ್ನೂಓದಿ: ಕನ್ನಡದ ವಿಷ್ಣು ವಿಜಯದಲ್ಲಿ ನಟಿಸಿದ್ದ ಮಮತಾ ಕುಲಕರ್ಣಿ ಈಗ ಸನ್ಯಾಸಿನಿ